ಯಶವಂತಪುರ ರೈಲ್ವೆ ನಿಲ್ದಾಣ ಹೊಸ ವಿನ್ಯಾಸದೊಂದಿಗೆ ಕಂಗೊಳಿಸುತ್ತಿದೆ.

ಒಟ್ಟು 12 ಕೋಟಿ ವೆಚ್ಚದಲ್ಲಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗಿದೆ. ಆಟೋ, ಕ್ಯಾಬ್ ನಿಲ್ದಾಣಗಳು ಸೇರಿದಂತೆ ಪಾರ್ಕಿಂಗ್ ಪ್ರದೇಶವನ್ನು ಅಗಲ ರಸ್ತೆಗಳೊಂದಿಗೆ ಉನ್ನತೀಕರಿಸಲಾಗಿದೆ. ಮೊದಲ ಹಂತದಲ್ಲಿ ರೈಲ್ವೆ ನಿಲ್ದಾಣವನ್ನು 12 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದೆ. ನಿಲ್ದಾಣದ ಪ್ರವೇಶದ್ವಾರ (ಫ್ಲಾಟ್ ಫಾರಂ ನಂ 6) ಬಳಿ ವಿಮಾನ ನಿಲ್ದಾಣ ಮಾದರಿಯ ಪ್ರವೇಶದ್ವಾರ ನಿರ್ಮಾಣ ಮಾಡಲಾಗಿತ್ತು. ಯಶವಂತಪುರ ಮಾರುಕಟ್ಟೆ ಕಡೆಯಿಂದ ನಿಲ್ದಾಣಕ್ಕೆ ಆಗಮಿಸುವುದಕ್ಕೆ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಈಗ ಮೆಟ್ರೋ ಸೇವೆಯೂ ಇರುವುದರಿಂದ ಹೊಸ ಪ್ರವೇಶ ದ್ವಾರವನ್ನು ನಿರ್ಮಾಣ ಮಾಡಲಾಗಿದೆ

ನಮ್ಮ ಮೆಟ್ರೋ, ಬೆಂಗಳೂರು-ತುಮಕೂರು ಹೆದ್ದಾರಿಯಿಂದ ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರು ಸುಲಭವಾಗಿ ಆಗಮಿಸಲು ವ್ಯವಸ್ಥೆ ಮಾಡಲಾಗುತ್ತದೆ. ಒಟ್ಟು 2 ಹಂತದಲ್ಲಿ ಯಶವಂತಪುರ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಗೊಳಿಸಲಾಗಿದೆ.
ರೈಲು ನಿಲ್ದಾಣದ ಮುಖ್ಯ ಕಟ್ಟಡದ ಚಾವಣಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾವಣಿ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲಾಗಿದೆ.

ಸುಮಾರು 200 ಮೀಟರ್ ಉದ್ದದ ಚಾವಣಿ ಇದಾಗಿದೆ. ನಿಲ್ದಾಣದ ಆವರಣದಲ್ಲಿ ಬಸ್ ಬೇ ನಿರ್ಮಾಣವಾಗಿದ್ದು, ಬಿಎಂಟಿಸಿ ಬಸ್‌ಗಳು ನೇರವಾಗಿ ಟರ್ಮಿನಲ್ ಬಳಿಗೆ ಬರಲಿದೆ. ಇದರಿಂದ ಪ್ರಯಾಣಿಕರು ಕೆಲವೇ ನಿಮಿಷಗಳಲ್ಲಿ ನಿಲ್ದಾಣ ಪ್ರವೇಶಿಸಿ, ರೈಲು ಹಿಡಿಯಲು ಅನುಕೂಲವಾಗಲಿದೆ. ಯಶವಂತಪುರ ಮೆಟ್ರೋ ರೈಲು ನಿಲ್ದಾಣದ ಸಂಪರ್ಕವೂ ಸುಲಭವಾಗಲಿದೆ.






