10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ
ಬೆಂಗಳೂರುನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. 10ನೇ ತರಗತಿ ಓದುತ್ತಿದ್ದ ಶಾಲಾ ಬಾಲಕಿ ತಾಯಿಯಾಗಿರುವುದು ಇದೀಗ ಗೊತ್ತಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ರಾಯಚೂರು ಮೂಲದ ಗುರುದೇವ್ ನಾಯಕ ಎಂಬ ಯುವಕನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಪ್ರಿಯಕರನಿಂದಲೇ ಶಾಲಾ ಬಾಲಕಿ ಗರ್ಭಿಣಿಯಾಗಿದ್ದು, ಈ ವಿಷಯ ಆಕೆಯ ಪೋಷಕರಿಗೂ ತಿಳಿದಿರಲಿಲ್ಲ.
ಶಾಲಾ ಬಾಲಕಿಗೆ ಡೆಲಿವರಿ ಪೈನ್ ಆರಂಭವಾದಾಗಲೇ ಘಟನೆ ಬೆಳಕಿಗೆ ಬಂದಿದೆ. ಪೋಷಕರು ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಡೆಲಿವರಿ ಮಾಡಿಸಿದ್ದಾರೆ. ಈ ವೇಳೆ ಆಸ್ಪತ್ರೆಯ ವೈದ್ಯರು ಕಾನೂನುಬದ್ಧವಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಯಿಂದ ಬಂದ ಮಾಹಿತಿಯ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿದ ಬಳಿಕ ಆರೋಪಿ ಗುರುದೇವ್ ನಾಯಕನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ತಾನು ಶಾಲಾ ಬಾಲಕಿಯನ್ನು ಪ್ರೀತಿಸುತ್ತಿದ್ದೆ ಎಂಬುದಾಗಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಆರೋಪಿ ಬಂಧನದಲ್ಲಿದ್ದು, ನ್ಯಾಯಾಂಗ ಕ್ರಮದಡಿ ಜೈಲಿಗೆ ಕಳುಹಿಸಲಾಗಿದೆ.
ಘಟನೆ ಸಂಬಂಧ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.






