“ಇಬ್ಬರು ಅಪ್ರಾಪ್ತರು ಸೇರಿದಂತೆ ಸುಮಾರು 29 ಮಂದಿ 15 ವರ್ಷದ ಬಾಲಕಿ ಮೇಲೆ ಮುಂಬೈನಲ್ಲಿ ಸುಮಾರು ಒಂಬತ್ತು ತಿಂಗಳುಗಳ ಕಾಲ ಅತ್ಯಾಚಾರ ನಡೆಸಿರುವ ಭಾರೀ ಆಘಾತಕಾರಿ ನಡೆದಿದೆ,” ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಜನವರಿ ತಿಂಗಳಿನಲ್ಲಿ ಬಾಲಕಿಯ ಸ್ನೇಹಿತ ಆಕೆಯ ಮೇಲೆ ರೇಪ್ ಮಾಡಿ ಅದನ್ನು ವಿಡಿಯೋ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಆತನ ಸ್ನೇಹಿತರು ಈ ವಿಡೀಯೋವನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು ಒಂಬತ್ತು ತಿಂಗಳುಗಳ ಕಾಲ ಬಾಲಕಿಯ ಮೇಲೆ ಪದೇ ಪದೇ 29 ಮಂದಿ ಅತ್ಯಾಚಾರ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಪೈಶಾಚಿಕ ಕೃತ್ಯದ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತರು ದತ್ತಾತ್ರೇಯ ಕರಾಳೆ, “ಇದೆಲ್ಲವೂ ಈ ಅಪ್ರಾಪ್ತ ಬಾಲಕಿಯ ಪ್ರೇಮಿಯು ಜನವರಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ಮಾಡಿದ ಸಂದರ್ಭದಿಂದ ಆರಂಭವಾಗಿದೆ,” ಎಂದು ಹೇಳಿದರು. “ಜನವರಿಯಲ್ಲಿ ಈ ಬಾಲಕಿಯ ಪ್ರೇಮಿಯು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅದನ್ನು ವಿಡಿಯೋ ಕೂಡಾ ಮಾಡಿಕೊಂಡಿದ್ದಾರೆ. ಈ ವಿಡೀಯೋವನ್ನು ತೋರಿಸಿ ಆಕೆಗೆ ಬ್ಲ್ಯಾಕ್‌ಮೇಲ್ ಮಾಡಲು ಆರಂಭ ಮಾಡಿದ್ದಾನೆ. ಬಳಿಕ ಆತನ ಸ್ನೇಹಿತರು ಹಾಗೂ ಪರಿಚಯಸ್ಥರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ,” ಎಂದು ತಿಳಿಸಿದರು.

ಇನ್ನು “ಈ ಆರೋಪಿಗಳು ಆಕೆಯ ಮೇಲೆ ಕನಿಷ್ಠ ನಾಲ್ಕೈದು ಬಾರಿಯಾದರೂ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಡೊಂಬಿವಿಲಿ, ಬದ್ಲಾಪುರ, ಮುರ್ಬಾದ್ ಮತ್ತು ರಬಾಲೆ ಮೊದಲಾದ ಜಿಲ್ಲೆಗಳಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ,” ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು ದತ್ತಾತ್ರೇಯ ಕರಾಳೆ ಹೇಳಿದರು.






