No menu items!
23.1 C
Munich
Monday, May 4, 2026

ದಾಖಲೆಯ 15ನೇ ಬಜೆಟ್ ಮಂಡನೆ !

Must read

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಲಿದ್ದಾರೆ.ಐದು ಗ್ಯಾರಂಟಿ ಯೋಜನೆ ಮುಂದುವರೆಸೋ ಜೊತೆಗೆ,ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕೆಲವೊಂದು ಜನಪ್ರಿಯ ಯೋಜನೆಗಳು ಘೋಷಣೆಯಾಗುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 10-15ಕ್ಕೆ ದಾಖಲೆಯ 15ನೇ ಆಯವ್ಯಯವನ್ನ ಸಿಎಂ ಸಿದ್ದರಾಮಯ್ಯ ಮಂಡನೆ ಮಾಡಲಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜನಪ್ರಿಯ ಯೋಜನೆ ಘೋಷಣೆಗಳ ಜೊತೆಗೆ ಹಣಕಾಸಿನ ಸಮತೋಲನ ಕಾಪಾಡುವ ಜವಾಬ್ದಾರಿ ಕಾಪಾಡುವ ಸಾಧ್ಯತೆ ಇದೆ.ಐದು ಗ್ಯಾರಂಟಿ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 58 ಸಾವಿರ ಕೋಟಿ ವೆಚ್ಚವಾಗಲಿದೆ.ಹೀಗಾಗಿ, ಈ ಬಾರಿ ತುರ್ತು ಕಾಮಗಾರಿಗಳಿಗೆ ಮಾತ್ರ ಅವಕಾಶ ನೀಡುವ ಲೆಕ್ಕಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ಇದ್ದಾರೆ ಎನ್ನಲಾಗಿದೆ. ಅಂದಾಜು 3.80 ಲಕ್ಷ ಕೋಟಿ ಬೃಹತ್ ಮೊತ್ತದ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.

- Advertisement -spot_img

More articles

- Advertisement -spot_img

Latest article