16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Date:

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲೆ, ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವುದರ ಜೊತೆಗೆ ಕಠಿಣ ನಿಯಮಗಳು ಮತ್ತು ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಬಳಕೆಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದು ತಿಳಿಸಿದ್ದಾರೆ.
ಇದಲ್ಲದೆ, 1ರಿಂದ 10ನೇ ತರಗತಿವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಹೊಸ ಕೊಠಡಿಗಳ ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ. ಮೀಸಲಿಡಲಾಗಿದೆ.
ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ. ಹಾಗೂ ಪೀಠೋಪಕರಣಗಳ ಖರೀದಿಗಾಗಿ 25 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ...

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...