ಕಾಲೇಜಿನಲ್ಲಿ 17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ಮಂಗಳವಾರ ಸಂಭವಿಸಿದೆ.
ತರಗತಿಗೆ ಹಾಜರಾಗಲು ಬಂದಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಕಾಶ್ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಮೃತಪಟ್ಟ ಯುವಕ.
ಕಾಲೇಜಿಗೆ ಬಂದಿದ್ದ ಪ್ರಕಾಶ್ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆದಲ್ಲೇ ಮೃತಪಟ್ಟಿದ್ದಾರೆ.
ಕಾಲೇಜು ಮೆಟ್ಟಿಲೇರುವಾಗ ಸುಸ್ತಾಗಿ ಕುಳಿತಿದ್ದ ಪ್ರಕಾಶ್ ಅವರನ್ನು ಕಾಲೇಜು ಸಿಬ್ಬಂದಿ ಪಾಲಕರಿಗೆ ತಿಳಿಸಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಖಾಸಗಿ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಕರೆದೊಯ್ಯವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಕಾಲೇಜು ಸಿಬ್ಬಂದಿ ತಿಳಿಸಿದ್ದಾರೆ.