ಬ್ಯಾಂಕ್ ಆಫ್ ಮಹಾರಾಷ್ಟ್ರ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 19 ಕೊನೆಯ ದಿನವಾಗಿದೆ. ಲಾ ಅಫೀಸರ್, ಸೆಕ್ಯೂರಿಟಿ ಆಫೀಸರ್ ಸೇರಿದಂತೆ ಒಟ್ಟು 190 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 36,000-69,810 ರೂ. ವೇತನವನ್ನು ನೀಡಲಾಗುತ್ತದೆ.
ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ 100, ಲಾ ಆಫೀಸರ್ 10, ಸೆಕ್ಯುರಿಟಿ ಆಫೀಸರ್ 10, ಎಚ್‌ಆರ್/ ಪರ್ಸನಲ್ ಆಫೀಸರ್ 10, ಡಿಬಿಎ 3, ವಿಂಡೋಸ್ ಆಡ್ಮಿನಿಸ್ಟ್ರೇಟರ್ 12, ಪ್ರಾಡಕ್ಟ್ ಸಪೋರ್ಟ್ ಇಂಜಿನಿಯರ್ 3 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ ಹುದ್ದೆಗೆ ಪದವಿ, ಲಾ ಆಫೀಸರ್ ಹುದ್ದೆಗೆ ಕಾನೂನು ವಿಷಯದಲ್ಲಿ ಪದವಿ, ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಪದವಿ, ಎಚ್‌ಆರ್/ ಪರ್ಸನಲ್ ಆಫೀಸರ್ ಹುದ್ದೆಗಳಿಗೆ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 20 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಕೆ ಮಾಡುವ ಒಬಿಸಿ ಅಭ್ಯರ್ಥಿಗಳು 1180 ರೂ. ಶುಲ್ಕ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳು 118 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವಾಗ ಗೊಂದಲಗಳಿದ್ದರೆ ಈ ವಿಳಾಸಗಳಿಗೆ ಇ-ಮೇಲ್ ಕಳಿಸಬಹುದಾಗಿದೆ.
cmstf@mahabank.co.in agmhrm2@mahabank.co.in , bomrpcell@mahabank.co.in
ಆಸಕ್ತ ಅಭ್ಯರ್ಥಿಗಳಿಗೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ bankofmaharashtra.in