2 ವರ್ಷದ ಮಗಳನ್ನು ನೇಣಿಗೆ ಹಾಕಿ ತಾನೂ ನೇಣಿಗೆ ಶರಣಾದ ತಾಯಿ!

Date:

ಕಲಬುರಗಿ: ಎರಡು ವರ್ಷದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯಲ್ಲಿ ನಡೆದಿದೆ.ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ತಾಯಿ ಶಿವಲೀಲಾ ಮಗಳು ವರ್ಷಿತಾ ಇಬ್ಬರೂ ಸಾವಿನ ಮನೆ ಸೇರಿದ್ದಾರೆ..ಗಂಡನ ಮನೆಯವರ ಕಿರುಕುಳ ತಾಳದೇ ಆತ್ಮಹತ್ಯೆ ದಾರಿ ಹಿಡಿದಿದ್ದಾಳೆ ಎನ್ನಲಾಗಿದೆ..ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ವಿಪರ್ಯಾಸ ಅಂದ್ರೆ ಬೆಳಗಾಗೋದ್ರಲ್ಲಿ ಎರಡೂ ಜೀವವೂ ಉಸಿರು ಚೆಲ್ಲಿವೆ.


ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದಳು ಅನ್ನೋ ಆರೋಪ ಕೇಳಿ ಬಂದಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ ಬದಲಾವಣೆ! 

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ...

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ, ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ: ಡಿ.ಕೆ. ಶಿವಕುಮಾರ್

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ, ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ:...

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....