No menu items!
18.3 C
Munich
Thursday, April 23, 2026

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

Must read

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

ಹಾವೇರಿ: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷಾಂತರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ. ಇದುವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೇರಲು ನಮ್ಮ ಜನಪರ ಸರ್ಕಾರದ ನೀತಿಗಳೇ ಕಾರಣ ಎಂದು ಹೇಳಿದರು.

ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸರ್ಕಾರದ ಸಹಸ್ರ ದಿನಾಚರಣೆ ಹಾಗೂ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆಗೆ ಸಚಿವರಾಗಿ ಕೃಷ್ಣಬೈರೇಗೌಡ ಬಂದ ನಂತರ ಕ್ರಾಂತಿಕಾರಿ ಪ್ರಗತಿ ಕಂಡುಬಂದಿದೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಜಿಡಿಪಿ ಏರಿಕೆಯ ಜೊತೆಗೆ ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ವೇಗವಾಗಿ ಮುನ್ನಡೆಯುತ್ತಿದೆ ಎಂದು ದಾಖಲೆಗಳನ್ನು ಉಲ್ಲೇಖಿಸಿದರು.

ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಈ ಸಾಧನೆಗಳನ್ನು ಮಾಡಿದ್ದೇವೆ ಎಂದು ಆರೋಪಿಸಿದ ಅವರು, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹಾಗೂ ಜಗದೀಶ್ ಶೆಟ್ಟರ್ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು.

ನಮ್ಮ ಸರ್ಕಾರಕ್ಕೆ 2 ವರ್ಷ 9 ತಿಂಗಳು ಪೂರ್ಣಗೊಂಡಿದೆ. ಘೋಷಿಸಿದ 243 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಿಂದಿನ ಅವಧಿಯಲ್ಲೂ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಪೂರ್ಣಗೊಳಿಸಿ, ಹೆಚ್ಚುವರಿಯಾಗಿ 30 ಭರವಸೆಗಳನ್ನು ಜಾರಿಗೆ ತಂದು “ನುಡಿದಂತೆ ನಡೆದು” ದಾಖಲೆ ನಿರ್ಮಿಸಿದ್ದೇವೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article