2007ರಲ್ಲಿ ನಡೆದ ಹೈದರಾಬಾದ್ ಮೆಕ್ಕಾ ಮಸೀದಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ಅಸೀಮಾನಂದ ಸೇರಿದಂತೆ ಎಲ್ಲಾ 10 ಆರೋಪಿಗಳನ್ನು ಎನ್ ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.
2007ರ ಮೇ 18 ರಂದು ಮೆಕ್ಕಾ ಮಸೀದಿಯಲ್ಲಿ ಪ್ರಬಲ ಬಾಂಬ್ ಸ್ಪೋಟಗೊಳಿಸಲಾಗಿತ್ತು. ದಾಳಿಯಲ್ಲಿ 9 ಮಂದಿ ಸಾವನ್ನಪ್ಪಿ, 58ಕ್ಕು ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ರು.