2024 ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -2 ರ ಫಲಿತಾಂಶ ಪ್ರಕಟ

Date:

ಬೆಂಗಳೂರು: ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ- 2 ರಲ್ಲಿ ಒಟ್ಟಾರೆ ಫಲಿತಾಂಶ 35.25% ಬಂದಿದೆ.
ಏಪ್ರಿಲ್ 29 ರಿಂದ ಮೇ 16ರವರೆಗೆ ಪರೀಕ್ಷೆಗಳು ನಡೆದಿತ್ತು. ಇಲಾಖೆ ವೆಬ್ ಸೈಟ್ http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಪರೀಕ್ಷೆಗೆ ಒಟ್ಟು 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 52,505 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಬಾಲಕರು 26,496 (31.31%) ಮತ್ತು 26009 ( 40.44%) ಬಾಲಕಿಯರು ಪಾಸ್ ಆಗಿದ್ದಾರೆ.
ಸಂಯೋಜನೆವಾರು ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ 11589 (22.24%) ವಾಣಿಜ್ಯ ವಿಭಾಗದಲ್ಲಿ 8709 (22.06%) ಮತ್ತು ವಿಜ್ಞಾನ ವಿಭಾಗದಲ್ಲಿ- 32207 (56.16%) ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಪರೀಕ್ಷೆ-2 ಬರೆದ ವಿದ್ಯಾರ್ಥಿಗಳಲ್ಲಿ ಫಲಿತಾಂಶ ಸುಧಾರಣೆ ಬಯಸಿದ 32940 ವಿದ್ಯಾರ್ಥಿಗಳು ಇದ್ದಾರೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿಗೆ ಅರ್ಜಿ ಸಲ್ಲಿಕೆ ಕೊನೆ ದಿನ ಮೇ 23, ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆ ಕೊನೆ ದಿನ ಮೇ 25 ಆಗಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...