24 ಗಂಟೆಯಲ್ಲಿ 43 ಸಾವಿರ ಕೊರೊನಾ ಸೋಂಕಿತರು ಪತ್ತೆ! ಹುಷಾರ್..

0
28

ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 43,509 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 38,465 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದ ಅವಧಿಯಲ್ಲಿ ಸೋಂಕಿನಿಂದ 640 ಮಂದಿ ಸಾವನ್ನಪ್ಪಿದ್ದಾರೆ.

ಗುರುವಾರದ ಈ ಅಂಕಿಸಂಖ್ಯೆ ಪ್ರಕಾರ, ಇದುವರೆಗೂ ದೇಶದಲ್ಲಿ ಒಟ್ಟು 31,528,114 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು, ಸದ್ಯ 4,03,840 ಪ್ರಕರಣಗಳಿವೆ.

ಇಲ್ಲಿಯವರೆಗೆ ಸೋಂಕಿನಿಂದ 4,22,662 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿನ ಗುಣಮುಖ ಪ್ರಮಾಣ ಶೇ 97.38 ಆಗಿದೆ.

ದೇಶದಲ್ಲಿ ಜುಲೈ 28ರಂದು 17,28,795 ಮಾದರಿಗಳ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೂ 46,26,29,773 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ, ಕೊರೊನಾ ಮೂರನೇ ಅಲೆ ಕುರಿತ ತಜ್ಞರ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿಗೆ ತಕ್ಕಂತೆ ಕ್ರಮಗಳನ್ನು ಅಳವಡಿಸಿಕೊಳ್ಳಲು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ರಾಜ್ಯ ಕೇಂದ್ರಿತ ಸೆರೋ ಸರ್ವೇಗಳನ್ನು ನಡೆಸಲು ಕೇಂದ್ರ ಸರ್ಕಾರ ಬುಧವಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ

LEAVE A REPLY

Please enter your comment!
Please enter your name here