ಕೊರೊನಾ ಭೀತಿ ನಡುವೆಯೇ 24 ಗಂಟೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಅನುಮತಿ

0
77

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಭೀತಿ ನಡುವೆಯೇ 24 ಗಂಟೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಪೊಲೀಸರು ಕೊನೆಗೂ ಅನುಮತಿ ನೀಡಿದ್ದಾರೆ. ಆದರೆ ನಿರ್ದಿಷ್ಟ ಪ್ರದೇಶಗಳಲ್ಲಿ ಮಾತ್ರ ರಾತ್ರಿ ಹೋಟೆಲ್ ತೆರೆಯಲು ಅನುಮತಿ ನೀಡಿದ್ದು, ಈ ಕುರಿತು ಸರ್ಕಾರಕ್ಕೆ ಪೊಲೀಸ್ ಇಲಾಖೆ ವರದಿ ಸಲ್ಲಿಸಿದೆ. ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್, ಪ್ರಮುಖ ಬಸ್ ನಿಲ್ದಾಣಗಳಲ್ಲಿ 24 ಗಂಟೆಗಳ ಕಾಲ ಹೋಟೆಲ್ ತೆರೆಯಬಹುದು.

 

 

ಈ ಜಾಗಗಳನ್ನ ಹೊರತುಪಡಿಸಿ ಬೇರೆಡೆ ತೆರೆಯಲು ಪೊಲೀಸ್ ಇಲಾಖೆ ಅವಕಾಶ ನೀಡಿಲ್ಲ. ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್​ಗಳಲ್ಲಿ ಪ್ರಯಾಣಿಕರ ಓಡಾಟವಿರುತ್ತದೆ. ಹೀಗಾಗಿ ಈ ಜಾಗಗಳಲ್ಲಿ ಮಾತ್ರ ಹೋಟೆಲ್ ತೆರೆಯಲು ಅವಕಾಶವಿರುತ್ತದೆ. ಇದನ್ನು ಹೊರತುಪಡಿಸಿ ಬೇರೆ ಕೆಡೆ ತೆರೆಯಲು ಅವಕಾಶವಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಇನ್ನು ಬೇರೆ ಕಡೆ  ಅನುಮತಿ ಕೊಟ್ಟರೆ ಉದ್ಭವಿಸುವ ಸಮಸ್ಯೆಗಳ ಬಗ್ಗೆ ಪೊಲೀಸರು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ.

 

 

ಇಡೀ ರಾತ್ರಿ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಮಾಲೀಕರು ಸರ್ಕಾರ, ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದರು. ಮನವಿ ಹಿನ್ನೆಲೆ ಪೊಲೀಸ್ ಇಲಾಖೆ ಅನುಮತಿ ಕೊಟ್ಟಿದೆ. ಅದರೆ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗುತ್ತದೆ ಎಂದು ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here