25 ವರ್ಷಗಳ ಬಳಿಕ ಅರಳಿದ ಕಮಲ: ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ಗೆ ಸೋಲು
ನವದೆಹಲಿ:- ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದೆ. ಬುಧವಾರ ದೆಹಲಿ ವಿಧಾನಸಭೆಗೆ ಚುನಾವಣೆ ನಡೆದಿದ್ದು, ಇಂದು 5 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಫಲಿತಾಂಶ ಹೊರಬಿದ್ದಿದೆ..ಆಮ್ ಆದ್ಮಿ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ಗೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದ್ದು, 25 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೇ ಬಂದಿದೆ..ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.ಇನ್ನೂ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೇರುತ್ತಿರುವುದು ಕಾರ್ಯಕರ್ತರಲ್ಲಿ ಸಂತಸ ತಂದಿದೆ.