2500 ಮನೆಗಳಿಗೆ ನಲ್ಲಿ ನೀರಿನ ಸಂಪಕ್ಷ ಕಲ್ಪಿಸಲಾಗುವುದು !

Date:

ಹಾವೇರಿ: ಕುಡಿಯುವ ನೀರು ಒದಗಿಸಲು ಅನೇಕ ಸಮಸ್ಯೆಗಳು ನೈಸರ್ಗಿಕ ಕಾರಣದಿಂದ ಇವೆ. ಆದ್ದರಿಂದ ಮುಂದಿನ ಡಿಸೆಂಬರ್ ಅಂತ್ಯದ ವೇಳೆಗೆ ಶಿಗ್ಗಾವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಲ್ಲಿ (ನಳದ) ನೀರು ಕೊಡುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾವಿ ತಾಲೂಕಿನ ತಡಸ್ ಗಾಮದಲ್ಲಿ ಗಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ 2022-23 ನೇ ಸಾಲಿನ ಜಲ ಜೀವನ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆ ಅಡಿ ನಲ್ಲಿ ನೀರು ಸರಬರಾಜು ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕುಡಿಯುವ ನೀರು ಒದಗಿಸಲು ಅನೇಕ ಸಮಸ್ಯೆಗಳು ನೈಸರ್ಗಿಕ ಕಾರಣದಿಂದ ಇವೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಎರಡು ಬಾರಿ ಪ್ರಸ್ತಾಪ ಮಾಡಿದ್ದರೂ, ಜಾರಿಗೆ ತರಲು ಸಾಧ್ಯವಾಗಲಿಲ್ಲ. ಆ ಸಂದರ್ಭದಲ್ಲಿ ನಮಗೆ ವರವಾಗಿ ಬಂದಿರುವಂಥದ್ದು. ಪ್ರಧಾನಿ ನರೇಂದ್ರ ಮೋದಿಯವರ ಜಲ ಜೀವನ್ ಮಿಷನ್ ಯೋಜನೆ. ಈ ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಎರಡೂ ಹಣ ನೀಡುತ್ತವೆ.
ಶಿಗ್ಗಾವಿ, ಸವಣೂರು, ಹಾನಗಲ್ ಮೂರು ತಾಲೂಕಿನ 438 ಕೋಟಿ ರೂ. ವೆಚ್ಚದ ಜಲ ಜೀವನ್ ಮಿಷನ್ ಯೋಜನೆ ಇದರಲ್ಲಿ ಸುಮಾರು ಮೂರು ಕೋಟಿ ರೂ. ತಡಸ್ ಗಾಮಕ್ಕೆ ನೀಡಲಾಗಿದ್ದು, ಸುಮಾರು 2500 ಮನೆಗಳಿಗೆ ನಲ್ಲಿ ನೀರಿನ ಸಂಪಕ್ಷ ಕಲ್ಪಿಸಲಾಗುವುದು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...