ಜೂನ್ 8 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜೂ.29ಕ್ಕೆ ಮುಂದೂಡಿ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಜೂ. 8 ರಂದು ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂ.11ರಂದು ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ.
ಜೂ. 21ರಿಂದ 28 ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ರಾಜ್ಯಾದ್ಯಂತ ನಡೆಯಲಿದೆ. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಕೇಂದ್ರಗಳು ಬಹುತೇಕ ಒಂದೇ ಆಗಿವೆ. ಆದ್ದರಿಂದ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿದೆ.
ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ