2nd Puc Result: ರಿಸಲ್ಟ್ ನೋಡಿ ನೇಣಿಗೆ ಕೊರಳೊಡ್ಡಿದ ಶಿಕ್ಷಕನ ಮಗ! ಫೇಲ್ ಆಗಿಲ್ಲ, ಕಡಿಮೆ ಬಂದಿಲ್ಲ.. ಆದ್ರೂ ದುಡುಕು ನಿರ್ಧಾರ?

tnit editors
1 Min Read

ಹಾಸನ:- ದ್ವಿತೀಯ ಪಿಯುಸಿ ರಿಸಲ್ಟ್ ನೋಡಿ ಬಂದ ವಿದ್ಯಾರ್ಥಿ ಓರ್ವ ಸೂಸೈಡ್ ಮಾಡಿಕೊಂಡಿರುವ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಜರುಗಿದೆ.

ಶಿಕ್ಷಕ ಪ್ರಕಾಶ್ ಅವರ ಪುತ್ರ ಮನೋಜ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ ಫಲಿತಾಂಶ ನೋಡಿ ಬಂದ ಮನೋಜ್ ನಿನ್ನೆ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಮನೋಜ್​ ಅರಸೀಕೆರೆ ನಗರದ ಅನಂತ ಪಿಯು ಕಾಲೇಜಿನಲ್ಲಿ ಪಿಸಿಎಂಬಿ ಸೈನ್ಸ್ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದ​. ನಿನ್ನೆ ಪ್ರಕಟವಾದ ಪಿಯು ಫಲಿತಾಂಶದಲ್ಲಿ ಶೇಕಡಾ 79 ಅಂಕ ಬಂದಿತ್ತು. ಕನ್ನಡ-98, ಇಂಗ್ಲೀಷ್- 85, ಫಿಸಿಕ್ಸ್-71, ಕೆಮಿಸ್ಟ್ರಿ- 74, ಮ್ಯಾಥ್ಸ್- 82 ಮತ್ತು ಬಯಾಲಜಿ-64 ಒಟ್ಟು-474 ಅಂಕ ಪಡೆದುಕೊಂಡಿದ್ದ. ಫಲಿತಾಂಶ ನೋಡಿ ಬಂದ ಮನೋಜ್​ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Share This Article