ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂದು ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್‍ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.
ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 72 ರನ್ ಗಳ ಸೋಲನ್ನಪ್ಪಿಕೊಂಡ ವಿರಾಟ್ ಪಡೆ ಸರಣಿಯನ್ನು ಜೀವಂತವಾಗಿಟ್ಟುಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ.
2015ರಿಂದ ಸತತವಾಗಿ 9 ಟೆಸ್ಟ್ ಸರಣಿಗಳನ್ನು ಗೆದ್ದಿರುವ ಭಾರತ ಈ ಸರಣಿಯಲ್ಲಿ ಗೆಲ್ಲವು ಸಾಧಿಸಲು ಇನ್ನುಳಿದ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕು.
2015ರಲ್ಲಿ ಭಾರತ ಪ್ರವಾಸ ಕೈಗೊಂಡಿದ್ದ ಸೌತ್ ಆಫ್ರಿಕಾ 0-3 ರನ್ ಗಳ ಅಂತರದಲ್ಲಿ ಹೀನಾಯವಾಗಿ ಸೋತಿತ್ತು. ಆ ಸೇಡನ್ನು ತೀರಿಸಿಕೊಳ್ಳಲು ದ. ಆಫ್ರಿಕಾ ಶತಾಯಗತಾಯ ಪ್ರಯತ್ನಿಸುತ್ತಿದೆ. ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ.
ಭಾರತ ತಂಡ : ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್ ರಾಹುಲ್, ಮುರುಳಿ ವಿಜಯ್, ಚೇತೇಶ್ವರ ಪೂಜಾರ, ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಉಮೇಶ್ ಯಾದವ್, ಇಶಾಂತ್ ಶರ್ಮಾ, ರವೀಂದ್ರ ಜಡೇಜಾ, ಶಿಖರ್ ಧವನ್, ಅಜಿಂಕ್ಯಾ ರಹಾನೆ, ಪಾರ್ಥಿವ್ ಪಟೇಲ್.
ದ.ಆಫ್ರಿಕಾ ತಂಡ : ಫಾಫ್ ಡುಪ್ಲೆಸಿಸ್ (ನಾಯಕ), ಡೀನ್ ಎಲ್ಗರ್, ಏಡನ್ ಮಕ್ರ್ರಮ್, ಹಶೀಮ್ ಆಮ್ಲಾ, ಎಬಿ ಡಿವಿಲಿಯರ್ಸ್, ಕ್ವಿಂಟನ್ ಡಿ ಕಾಕ್, ವೆರ್ನನ್ ಫಿಲ್ಯಾಂಡರ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಮೊರ್ನೆ ಮಾರ್ಕೆಲ್, ಕ್ರಿಸ್ ಮೊರಿಸ್, ತೆಂಬಾ ಬವೂಮ, ಥೆಯುನಿಸ್, ಡಿ.ಬ್ರುಯಿನ್, ಆ್ಯಂಡಿಲ್ ಫೆಲುಕ್ವಾಯೊ, ಲುಂಗಿ ಎನ್ ಗಿಡಿ, ಡುಯೇನ್ ಒಲಿವಿಯರ್.