3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಜೀವಾವಧಿ ಶಿಕ್ಷೆ!
ಮಂಡ್ಯ: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 53 ವರ್ಷದ ಶಿವಣ್ಣ ಎಂಬಾತನಿಗೆ ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಈ ದುರ್ಘಟನೆ 2023ರ ಡಿಸೆಂಬರ್ 11ರಂದು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಶಿವಣ್ಣ ಪುಸಲಾಯಿಸಿ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದ. ಬಳಿಕ ಈ ವಿಷಯ ಯಾರಿಗೂ ಹೇಳಬಾರದೆಂದು ಬಾಲಕಿಗೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಂಡು ತನಿಖೆ ನಡೆಸಿದರು ಮತ್ತು ದೋಷಾರೋಪಣ ಪಟ್ಟಿ ಸಲ್ಲಿಸಿದರು. ವಿಚಾರಣೆಯ ವೇಳೆ ಸರ್ಕಾರಿ ವಕೀಲ ಹೆಬ್ಬಕವಾಡಿ ನಾಗರಾಜು ಅವರು ಧೃಢವಾದ ವಾದ ಮಂಡಿಸಿದರು. ಅವರ ವಾದ ಆಲಿಸಿದ ನ್ಯಾಯಾಧೀಶ ದಿಲೀಪ್ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದರು.