ಸ್ಯಾಂಡಲ್ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರ ತಂದೆ ದೇವರಾಜ್ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು,
ಕಳೆದ ನಾಲ್ಕು ದಿನಗಳಿಂದ ಮಂಗಳೂರಿನ ಸೋಲೆತ್ತೂರು ಗ್ರಾಮದಲ್ಲಿ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಿದ್ದ ಅವರಿಗೆ ಹಬ್ಬದ ಸಂಭ್ರಮದ ಬಳಿಕ ಕಫ ಹೆಚ್ಚಾಗಿತ್ತು ಈ ಎಂದು ತಿಳಿದುಬಂದಿದ್ದು ಇಂದು ದೇವರಾಜ್ ಅವರು ಬೆಂಗಳೂರಿನ ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ದೇವರಾಜ್ ಅವರ ಹುಟ್ಟೂರು ಮಂಗಳೂರಿನಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.