ರಾಮನಗರ: ಚಾಕೊಲೇಟ್ ಕೊಡಿಸುವುದಾಗಿ ಸಂಬಂಧಿಕನೇ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವಸೆಸಗಿ ಕೊಲೆಗೈದ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದ ಹಳೇ ಮಸೀದಿ ಮೊಹಲ್ಲಾದಲ್ಲಿ ನಡೆದಿದೆ. ನಾಪತ್ತೆಯಾಗಿದ್ದ 4 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಇರ್ಫಾನ್ ಖಾನ್ ಎಂಬಾತನೇ ಕೃತ್ಯವೆಸಗಿದ ಕಾಮುಕನಾಗಿದ್ದು, ಆರೋಪಿ ಬಾಲಕಿಯನ್ನ ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಮಾಡಿದ ಬಳಿಕ ಕೊಲೆ ಮಾಡಿ ಶವವನ್ನ ರಸ್ತೆ ಪಕ್ಕದ ಪೊದೆಯಲ್ಲಿ ಎಸೆದು ಎಸ್ಕೇಪ್ ಆಗಿದ್ದನು.
ಬಾಲಕಿ ಕಾಣೆಯಾದ ಹಿನ್ನೆಲೆಯಲ್ಲಿ ಪೋಷಕರು ಮಾಗಡಿಯ ಟೌನ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಮಾಗಡಿ ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ಇಂದು ಮಾಗಡಿ ಟೌನ್ ನಲ್ಲಿ ಸಾವಿರಾರು ಮುಸ್ಲಿಂ ಸಮುದಾಯದವರಿಂದ ಪ್ರತಿಭಟನೆ ನಡೆಸಿ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಮಾಗಡಿ ತಹಶಿಲ್ದಾರ್ ಅವರಿಗೆ ಮನವಿ ನೀಡಿದ್ದಾರೆ.