ಮಹಾರಾಷ್ಟ್ರದಲ್ಲಿ ಕಳೆದ ವಾರ ರಾತ್ರೋರಾತ್ರಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು ಆದರೆ ಇದೀಗ ಎಲ್ಲ ಬಹುಮತದಿಂದ ಶಿವಸೇನೆಯ ಉದ್ಧವ್ ಠಾಕ್ರೆ ಯನ್ನ ಆಯ್ಕೆ ಮಾಡಲಾಯಿತ ಉದ್ಧವ್ ಠಾಕ್ರೆ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ 400 ರೈತರ ಕುಟುಂಬದ ಸದಸ್ಯರನ್ನು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಅನ್ನದಾತರಿಗೆ ಗೌರವ ನೀಡಿ ಅವರನ್ನು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು ಶಿವಸೇನೆ ತಿಳಿಸಿದೆ.
ಶಿವಸೇನೆ, ಎನ್ಸಿಪಿ, ಕಾಂಗ್ರೆಸ್ ಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ .