402 ಪಿಎಸ್ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ!

Date:

402 ಪಿಎಸ್ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ!

ಬೆಂಗಳೂರು:- ಕರ್ನಾಟಕ 402 ಪಿಎಸ್ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ ಆಗಿದೆ. ಈ ಬಗ್ಗೆ ಮಾತನಾಡಿದ ಜಿ ಪರಮೇಶ್ವರ್, ರಾಜ್ಯ ಸರ್ಕಾರದಲ್ಲಿ ಖಾಲಿಯಿದ್ದ 402 ಪೊಲೀಸ್ ಸಬ್ ಇನ್ಸ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.22ರ ಬದಲಾಗಿ ಸೆ.28ರ ಶನಿವಾರದಂದು ನಡೆಸಲು ಮುಂದೂಡಿಕೆ ಮಾಡಲು ತೀರ್ಮಾನಿಸಲಾಗಿದೆ.

ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಇದರ ಜೊತೆಗೆ ವಿಪಕ್ಷವಾದ ಬಿಜೆಪಿಯ ನಾಯಕರ ನಿಯೋಗವು ಮನವಿ ನೀಡಿತ್ತು. ಈ ಹಿನ್ನೆಲೆಯಲ್ಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು.

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ...

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..?

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..? ದಸರಾ,...

ನವರಾತ್ರಿ ಎಂಟನೇ ದಿನ – ಮಹಾಗೌರಿ !

ನವರಾತ್ರಿ ಎಂಟನೇ ದಿನ – ಮಹಾಗೌರಿ ! ದೇವಿಯ ಹಿನ್ನಲೆ ನವರಾತ್ರಿಯ ಎಂಟನೇ ದಿನ...

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...