5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಸುತ್ತೋಲೆ!

Date:

ಬೆಂಗಳೂರು:- 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ ಮಾಡಿ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಹೈಕೋರ್ಟ್ ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಕಳೆದ ವಾರ ಅಂದ್ರೆ ಬುಧವಾರ ರದ್ದುಪಡಿಸಿ ಆದೇಶ ನೀಡಿತ್ತು. ಆದರೆ ಇದನ್ನ ಪ್ರಶ್ನಿಸಿ ಹೈಕೋರ್ಟ್ ಆದೇಶದ ವಿರುದ್ಧ ಶಿಕ್ಷಣ ಇಲಾಖೆ ಗುರುವಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು ಇದಕ್ಕೆ ಹೈಕೋರ್ಟ್ ಪರೀಕ್ಷೆ ನಡೆಸಲು ಅವಕಾಶ ನೀಡಿತ್ತು

ಹೈ ಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲೆ ಶಿಕ್ಷಣ ಇಲಾಖೆ ಮಾರ್ಚ್ 11ರಿಂದ ಅಂದ್ರೆ ಮೊನ್ನೆಯಿಂದ ಮೌಲ್ಯಾಂಕನ ಪರೀಕ್ಷೆ ನಡೆಸುತ್ತಿದ್ದು ವಿದ್ಯಾರ್ಥಿಗಳು ನಿನ್ನೆ ಹಾಗೂ ಇಂದು ಪರೀಕ್ಷೆ ಬರೆದಿದ್ದಾರೆ. ಆದರೆ ಈ ನಡುವೆ ಹೈಕೋರ್ಟ್ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ನಿನ್ನೆ ಆದೇಶದಲ್ಲಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿದೆ. ಈ ಹಿನ್ನೆಲೆ ಇಂದು ನಡೆಯಬೇಕಾಗಿದ್ದ 5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನ ಪರೀಕ್ಷೆಗಳನ್ನ ಶಿಕ್ಷಣ ಇಲಾಖೆ ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ನೀಡಿದ್ದಾರೆ.

ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವಿನ ಜಟಾಪಟಿಯ ಕಾರಣಕ್ಕೆ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಗೊಂದಲ ಮಯವಾಗಿದ್ದು ವಿದ್ಯಾರ್ಥಿ ಹಾಗೂ ಪೋಷಕರು ಪರದಾಡುವಂತಾಗಿದೆ. ಒಟ್ನಲ್ಲಿ ಹಠಕ್ಕೆ ಬಿದ್ದಂತೆ ಪಬ್ಲಿಕ್ ಮಾದರಿಯಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಇಲಾಖೆಯ ನಡೆ ಮಕ್ಕಳ ಪಾಲಿಗ ಅದೇಷ್ಟು ಉಪಯುಕ್ತವೋ ಗೊತ್ತಿಲ್ಲ. ಆದ್ರೆ ಈಗ ಈ ಪರೀಕ್ಷೆಗಳಿಗೆ ಬ್ರೇಕ್ ಬೀದಿದ್ದು ವಿದ್ಯಾರ್ಥಿಗಳಿಗೆ ಹಾಗು ಪೋಷಕರಿಗೆ ಗೊಂದಲ ಶುರುವಾಗಿದೆ.

Share post:

Subscribe

spot_imgspot_img

Popular

More like this
Related

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ ಬೆಂಗಳೂರು:...

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಬಳ್ಳಾರಿ:...

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ ಮಂಡ್ಯ:...

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ ಚಳಿಗಾಲದಲ್ಲಿ ಅನೇಕರು...