ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರ ಮಾರಕ ದಾಳಿಗೆ ನಲುಗಿದ ನ್ಯೂಜಿಲ್ಯಾಂಡ್ ತಂಡ ಮೊದಲ ಪಂದ್ಯದ ಐದನೇ ದಿನದಾಟದಂತ್ಯಕ್ಕೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ ಶರಣಾಗಿದೆ.
ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವು ಭಾರತದ ಮಾರಕ ಸ್ಪಿನ್ ದಾಳಿಗೆ ಬಲಿಯಾಗಿದೆ ಈ ಮೂಲಕ ಭಾರತದೆದುರು ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಸೋಲನ್ನೊಪ್ಪಿಕೊಂಡಿದೆ.
ಬೌಲರ್‍ಗಳ ಮಿಂಚಿನ ದಾಳಿಯ ನಡುವೆಯೂ ಉತ್ತಮ ಪ್ರದರ್ಶನ ತೋರಿದ ಭಾರತದ ಬ್ಯಾಟ್ಸ್ ಮನ್‍ಗಳು ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ದ್ವಿತೀಯ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಕಳೆದುಕೊಂಡು 377 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಪ್ರಥಮ ಇನ್ನಿಂಗ್ಸ್ ನಲ್ಲಿ ಗಳಿಸಿದ್ದ 56ರನ್ನು ಮುನ್ನಡೆ ಸಹಿತ ಭಾರತ ತಂಡ ಕಿವೀಸ್‍ಗೆ 434 ರನ್‍ಗಳ ಗುರಿಯನ್ನು ನೀಡಿತ್ತು. ಇದರ ಬೆನ್ನತ್ತಿದ ಕಿವೀಸ್ ಎರಡನೇ ಇನ್ನಿಂಗ್ಸ್ ನ 4 ನೇ ದಿನದಲ್ಲೇ ಪ್ರಭಲ ನಾಲ್ಕು ವಿಕೇಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡಿತು. ಕೊನೆಯ ದಿನದಾಟದಂತ್ಯಕ್ಕೆ ನ್ಯೂಜಿಲ್ಯಾಂಡ್ ತಂಡ 236 ರನ್‍ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲನ್ನೊಪ್ಪಿಕೊಂಡಿತು ಆ ಮೂಲಕ ಭಾರತ ತಂಡ 197 ರನ್‍ಗಳ ರೋಚಕ ಜಯ ಕಂಡಿದೆ. ಭಾರತ ಪರ ಅಶ್ವಿನ್ ಆರು ವಿಕೆಟ್ ಪಡೆಯುವುದರ ಮೂಲಕ ಏತಿಹಾಸಿಕ ಪಂದ್ಯದಲ್ಲಿ ಭಾರತದ ಗೆಲುವಿಗೆ ಪ್ರಮುಖ ಕಾರಣರಾದರು.
Like us on Facebook The New India Times
POPULAR STORIES :
“ಅಣ್ಣಾ ಕಿಸಾನ್ ಬಾಬುರಾವ್ ಹಜಾರೆ” ಈ ಬಾರಿಯ ಕಪಿಲ್ ಶರ್ಮಾ ಶೋನಲ್ಲಿ..!
ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?
ಪೆಪ್ಸಿ ಆ್ಯಡ್‍ನಲ್ಲಿ ವಿರಾಟ್‍ನ ದ್ವಂದ್ವ ನಿಲುವು..!
ಜಿಯೋ ಎಫೆಕ್ಟ್: ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಉಚಿತ ಅನ್‍ಲಿಮಿಟೆಡ್ ವಾಯ್ಸ್ ಕಾಲ್..!
ಆನ್‍ಲೈನ್ ಶಾಪಿಂಗ್ ಮಾಡೋಕು ಮುನ್ನ ಈ ಸ್ಟೋರಿ ಓದಿ..!
ನಿಮಗೆ ಗೊತ್ತಾ ವಾಟ್ಸಾಪ್‍ಗಿಂತ ‘ಅಲ್ಲೋ ಆಪ್’ ಸಖತ್ ಡಿಫರೆಂಟ್ ಆಗಿದೆ..!
ಐಫೋನ್-7 ಮೋಬೈಲ್‍ನ ಕೋಕ ಕೋಲದಲ್ಲಿ ಹಾಕಿ ಫ್ರೀಜರ್‍ನಲ್ಲಿ ಇಟ್ಟ ಮುಂದೇನಾಯ್ತು ಗೊತ್ತಾ.?