ನೇಪಾಳಕ್ಕೆ 5 ಸಾವಿರ ಕೋಟಿ ಸಾಲ ನೀಡಲು ಮುಂದಾದ ಭಾರತ..!

Date:

ಭೂಕಂಪ ಪೀಡಿತ ಪ್ರದೇಶವಾದ ನೇಪಾಳದಲ್ಲಿ ಕಳೆದ ಬಾರಿ ಸಂಭವಿಸಿದ ಭೀಕರ ಭೂಕಂಪದಿಂದಾಗಿ ನಲುಗಿ ಹೋಗಿರುವ ನೇಪಾಳಕ್ಕೆ 5 ಸಾವಿರ ಕೋಟಿ ರೂ. ಸಾಲ ನೀಡುವುದಾಗಿ ಭಾರತ ಸರ್ಕಾರ ತೀರ್ಮಾನಿಸಿದೆ.
ನೇಪಾಳಕ್ಕೆ ಹೊಸ ಪ್ರಧಾನಿಯಾದ ಬಳಿಕ ಭಾರತಕ್ಕೆ ನಾಲ್ಕು ದಿನಗಳ ಕಾಲ ಪ್ರವಾಸ ಬೆಳೆಸಿರುವ ನೇಪಾಳದ ನೂತನ ಪ್ರಧಾನಿ ಪುಷ್ಪ ಕಮಲ್ ದಹಾಲ್(ಪ್ರಚಂಡ) ಶುಕ್ರವಾರ ನವದೆಹಲಿಯಲ್ಲಿರುವ ಹೈದರಾಬಾದ್ ಹೌಸ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಭಾರತ ಪ್ರಮುಖ ಮೂರು ಒಪ್ಪಂದಗಳಿಗೆ ಸಹಿ ಹಾಕಿದೆ.
ಇದೇ ವೇಳೆ ಭೂಕಂಪದಿಂದಾಗಿ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗಿರುವ ನೇಪಾಳದ ಕೆಲವು ನಗರಗಳ ನವೀಕರಣಕ್ಕಾಗಿ ರಿಯಾಯಿತಿ ದರದಲ್ಲಿ ಸಾಲ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇನ್ನು ಭಾರತ ನೀಡುತ್ತಿರುವ ಸಾಲದಲ್ಲಿ ನೇಪಾಳದ ರಾಜಧಾನಿ ಕಠ್ಮಂಡು ಸೇರಿದಂತೆ ಹಲವು ನಗರಗಳ ನವೀಕರಣಕ್ಕೆ ಬಳಸಿಕೊಳ್ಳಲಾಗುವುದು ಎಂದು ನೇಪಾಳದ ಪ್ರಧಾನಿ ತಿಳಿಸಿದ್ದಾರೆ.
ನೇಪಾಳದ ತೆರೈ ಪ್ರದೇಶದಲ್ಲಿನ ರಸ್ತೆ ಮಾರ್ಗ, ಹಾಗೂ ಮೂಲ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವುದು ಕುರಿತಂತೆ ಎರಡು ದೇಶದ ಪ್ರಧಾನಿ ಸಹಿ ಹಾಕಲಾಗಿದ್ದು, ಪ್ರಚಂಡ ಅವರ ಹುಟ್ಟೂರಾದ ಕಾಸ್ಕಿಯಲ್ಲಿ ಪಾಲಿಟೆಕ್ನಿಕ್ ಸ್ಥಾಪಿಸುವ ಕುರಿತಂತೆ ಉಭಯ ರಾಷ್ಟ್ರಗಳ ಪ್ರಧಾನಿಗಳು ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಭಾರತ ವಿರುದ್ದದ ಕಾರ್ಯಾಚರಣೆಯಲ್ಲಿ ನೇಪಾಳ ಹಾಗೂ ನೇಪಾಳದ ಕಾರ್ಯಚರಣೆಗೆ ಭಾರತದ ನೆಲವನ್ನು ಬಳಸಿಕೊಳ್ಳದಿರುವ ಮಹತ್ವದ ಇಪ್ಪಂದಕ್ಕೂ ಉಭಯ ರಾಷ್ಟ್ರದ ನಾಯಕರು ಸಹಿ ಹಾಕಿದ್ದಾರೆ.

POPULAR  STORIES :

ಹೌಸಿಂಗ್ ಸೊಸೈಟಿಯಲ್ಲಿ ಮುಸ್ಲೀಮರಿಗೆ ನೋ ಎಂಟ್ರಿ…!

ಸರ್ಕಾರ ಬಿದ್ದರೂ 20ರ ನಂತರ ನೀರು ಬಿಡೆನು: ಸಿಎಂ ಸಿದ್ದರಾಮಯ್ಯ ಗುಡುಗು..!

ಚೀನಾ ತನ್ನ ದೇಶದ 6 ವರ್ಷದ ಮಕ್ಕಳನ್ನು ಭವಿಷ್ಯದ ಒಲಿಂಪಿಕ್ ದಿಗ್ಗಜರನ್ನು ಮಾಡಲು ಕೊಡುವ ಕಠಿಣ ತರಬೇತಿ..!

ತಿಂಗಳಲ್ಲಿ ಎರಡನೇ ಬಾರಿ ಪೆಟ್ರೊಲ್ ದರ ಏರಿಕೆ…!

ತಾಮ್ರದ ಪಾತ್ರೆಯಲ್ಲಿ ಕೂಡಿಟ್ಟ ನೀರನ್ನು ಸೇವಿಸುವುದು ಉತ್ತಮ ಯಾಕೆ..?

ಪತಂಜಲಿಯ ಸಿ.ಇ.ಒ ಆಚಾರ್ಯ ಬಾಲಕೃಷ್ಣ , ಈಗ ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರು..!

ಸಿರಿಯಾ ದೇಶದ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಯಿಂದ ರಕ್ಷಿಸಲು ಪಣ ತೊಟ್ಟು ನಿಂತ ದಿಟ್ಟ ಮಹಿಳೆ.

ಬಿಎಸ್‍ಎನ್‍ಎಲ್ ಜೊತೆ ಜಿಯೋ ಒಪ್ಪಂದ…!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...