ಐಪಿಎಲ್ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್ ಬಾರಿಸಿರುವ ಆರಂಭಿಕ ಜೋಡಿ

0
39

ಐಪಿಎಲ್ ಇತಿಹಾಸದಲ್ಲಿ ಉತ್ತಮ ಆರಂಭದೊಂದಿಗೆ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಆರಂಭಿಕ ಜೋಡಿಗಳ ಪಟ್ಟಿ ಈ ಕೆಳಕಂಡಂತಿದೆ ನೋಡಿ.

5. ಕ್ರಿಸ್ ಗೇಲ್ ಮತ್ತು ತಿಲಕರತ್ನೆ ದಿಲ್ ಶಾನ್ – 167 ರನ್ಸ್

2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪುಣೆ ವಾರಿಯರ್ಸ್ ನಡುವೆ ನಡೆದ ಪಂದ್ಯವನ್ನು ಯಾರಿಗೆ ತಾನೆ ಮರೆಯಲು ಸಾಧ್ಯ ಹೇಳಿ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 263 ರನ್ ಗಳಿಸಿ ದಾಖಲೆ ಬರೆದಿತ್ತು. ಈ ಪಂದ್ಯದಲ್ಲಿ ಬೆಂಗಳೂರು ತಂಡದ ಪರ ಆರಂಭಿಕ ಜೋಡಿಯಾಗಿ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ ಮತ್ತು ದಿಲ್ ಶಾನ್ ಜೋಡಿ 167 ರನ್‌ಗಳ ಆರಂಭಿಕ ಜತೆಯಾಟವಾಡಿತ್ತು.

4. ಶೇನ್ ವಾಟ್ಸನ್ ಮತ್ತು ಫಾಫ್ ಡು ಪ್ಲೆಸಿಸ್ – 181 ರನ್ಸ್

2020ರ ಐಪಿಎಲ್ ಟೂರ್ನಿಯ ಪಂದ್ಯವೊಂದರಲ್ಲಿ ಪಂಜಾಬ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 179 ರನ್‌ಗಳ ಗುರಿಯನ್ನು ಬೆನ್ನಟ್ಟಿತ್ತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿದ್ದ ಶೇನ್ ವಾಟ್ಸನ್ ಮತ್ತು ಫಾಫ್ ಡು ಪ್ಲೆಸಿಸ್ 181 ರನ್‌ಗಳ ಭರ್ಜರಿ ಆರಂಭಿಕ ಆಟ ಆಡುವ ಮುಖಾಂತರ 10 ವಿಕೆಟ್‍ಗಳ ಗೆಲುವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಕಂಡಿತು.

3. ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ – 183 ರನ್ಸ್

ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಜೋಡಿ ಅತಿ ಹೆಚ್ಚು ರನ್ ಗಳಿಸಿದ ಐಪಿಎಲ್ ಆರಂಭಿಕ ಜೋಡಿ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. 2020ರ ಐಪಿಎಲ್ ಟೂರ್ನಿಯಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಪರ ಕೆ ಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ 183 ರನ್‌ಗಳ ಆರಂಭಿಕ ಜತೆಯಾಟವಾಡಿದರು. ಇವರ ಈ ಆಟದಿಂದ ಪಂಜಾಬ್ ತಂಡ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 223 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.

2. ಗೌತಮ್ ಗಂಭೀರ್ ಮತ್ತು ಕ್ರಿಸ್ ಲಿನ್ – 184 ರನ್ಸ್

2017ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗುಜರಾತ್ ಲಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ 4 ವಿಕೆಟ್ ನಷ್ಟಕ್ಕೆ 183 ರನ್ ಕಲೆಹಾಕಿ ಕೊಲ್ಕತ್ತಾ ತಂಡಕ್ಕೆ 184 ರನ್‌ಗಳ ಗುರಿ ನೀಡಿದರು. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ತಂಡ ಗೌತಮ್ ಗಂಭೀರ್ ಮತ್ತು ಕ್ರಿಸ್ ಲಿನ್ 14.5 ಓವರ್‌ಗಳಲ್ಲಿಯೇ 184 ರನ್‌ಗಳ ಗುರಿ ತಲುಪುವುದರ ಮೂಲಕ 31 ಎಸೆತಗಳನ್ನು ಬಾಕಿ ಉಳಿಸಿ ಜಯ ಸಾಧಿಸಿತು. ಗಂಭೀರ್ ಮತ್ತು ಲಿನ್ ಅವರ ಈ ಆರಂಭಿಕ ಜತೆಯಾಟ ಐಪಿಎಲ್ ಟೂರ್ನಿಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆರಂಭಿಕ ಜೋಡಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

1. ಜಾನಿ ಬೈರ್‌ಸ್ಟೋವ್ ಮತ್ತು ಡೇವಿಡ್ ವಾರ್ನರ್ – 185 ರನ್ಸ್

2019ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡದ ಪರ ಜಾನಿ ಬೈರ್‌ಸ್ಟೋವ್ ಮತ್ತು ಡೇವಿಡ್ ವಾರ್ನರ್ ಆರಂಭಿಕ ಜೋಡಿಯಾಗಿ ಕಣಕ್ಕಿಳಿದು 185 ರನ್‌ಗಳ ಜತೆಯಾಟವಾಡುವ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ರನ್ ಬಾರಿಸಿದ ಆರಂಭಿಕ ಜೋಡಿ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿತು. ಈ ದಾಖಲೆಯ ಆರಂಭಿಕ ಜತೆಯಾಟದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿತು.

LEAVE A REPLY

Please enter your comment!
Please enter your name here