ಸಚಿನ್‌ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಟ್ರೋಲ್ ಆದ ವಿರಾಟ್

Date:

 

ಏಪ್ರಿಲ್ 24, ‘ಗಾರ್ಡ್ ಆಫ್ ಕ್ರಿಕೆಟ್’ ಸಚಿನ್ ತೆಂಡೂಲ್ಕರ್ ಅವರ ಜನ್ಮದಿನ. ಈ ದಿನದಂದು ಸಚಿನ್ ತೆಂಡೂಲ್ಕರ್ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿದಂತೆ ಲಕ್ಷಾಂತರ ಜನರಿಂದ ಶುಭಾಶಯಗಳು ಹರಿದು ಬರುತ್ತವೆ. ಇಂದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಸಚಿನ್ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಸಹ ತಮ್ಮ ಟ್ವಿಟರ್ ಖಾತೆಯ ಮೂಲಕ ಶುಭಾಶಯವನ್ನು ಕೋರಿದ್ದಾರೆ. ‘ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಸಚಿನ್ ಪಾಜೀ’ ಎಂದು ಟ್ವೀಟ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದರು. ಆದರೆ ಇದೀಗ ಈ ಟ್ವೀಟ್ ವಿವಾದದ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಇದೇ ವಿರಾಟ್ ಕೊಹ್ಲಿ ಈ ಹಿಂದೆ ವೆಸ್ಟ್ ಇಂಡೀಸ್‌ನ ಖ್ಯಾತ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ಮಾಡಿದ್ದ ಟ್ವೀಟ್.

 

ಮಾರ್ಚ್ 7ನೇ ತಾರೀಕಿನಂದು ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ವಿರಾಟ್ ಕೊಹ್ಲಿ ‘ಕ್ರಿಕೆಟ್ ಇತಿಹಾಸ ಕಂಡ ಸಾರ್ವಕಾಲಿಕ ಅತ್ಯುತ್ತಮ ಆಟಗಾರ, ಭಯವೇ ಇಲ್ಲದ ರಾಜ ವಿವಿಯನ್ ರಿಚರ್ಡ್ಸ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿರಾಟ್ ಸಚಿನ್ ಅವರಿಗೆ ವಿಶ್ ಮಾಡುವಾಗ ‘ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್’ ಎಂದು ಟ್ವೀಟ್ ಮಾಡಿದ್ದಾರೆ. ಆದರೆ ವಿವಿಯನ್ ರಿಚರ್ಡ್ಸ್ ಅವರಿಗೆ ವಿಶ್ ಮಾಡುವ ‘ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರ ವಿವಿಯನ್ ರಿಚರ್ಡ್ಸ್’ ಎಂದು ಟ್ವೀಟ್ ಮಾಡಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಪ್ರಕಾರ ಸಚಿನ್‌ಗಿಂತ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಆಟಗಾರರಾ? ಎಂಬ ಚರ್ಚೆಗಳು ಮತ್ತು ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...