Home ಎಲ್ಲೆಲ್ಲಿ ಏನೇನು.? 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಈಶ್ವರಪ್ಪಗೆ ಗೇಟ್ ಪಾಸ್

6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಈಶ್ವರಪ್ಪಗೆ ಗೇಟ್ ಪಾಸ್

0
6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಈಶ್ವರಪ್ಪಗೆ ಗೇಟ್ ಪಾಸ್

ಬೆಂಗಳೂರು: ಮಾಜಿ ಸಚಿವ ಈಶ್ವರಪ್ಪಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಮಗನಿಗೆ ಟಿಕೆಟ್ ಸಿಗದ ಹಿನ್ನೆಲೆ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯಜೇಂದ್ರ ಮನವಿ ಮಾಡಿದ್ದರು. ಆದರೆ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಹೀಗಾಗಿ ಪಕ್ಷದ ನಿಯಮ ಉಲ್ಲಂಘನೆ ಹಿನ್ನೆಲೆ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.