6 ವರ್ಷಗಳ ಬಳಿಕ ಮೊದಲ ಟೆಸ್ಟ್ ಆಡಳಿದ್ದಾರೆ ಮಹಿಳಾ ತಂಡ ಭಾರತ

Date:

ಭಾರತ ಮಹಿಳಾ ಕ್ರಿಕೆಟ್‌ ತಂಡ ಇಂಗ್ಲೆಂಡ್‌ ವನಿತೆಯರ ಎದುರು ಏಕೈಕ ಟೆಸ್ಟ್‌ ಪಂದ್ಯದಲ್ಲಿ ಇದೇ ವರ್ಷ ಪೈಪೋಟಿ ನಡೆಸಲಿದೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಸೋಮವಾರ ಘೋಷಿಸಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್‌ ತಂಡ 2014ರಲ್ಲಿ ಮಿಥಾಲಿ ರಾಜ್‌ ಸಾರಥ್ಯದೊಂದಿಗೆ ದಕ್ಷಿಣ ಆಫ್ರಿಕಾ ವನಿತೆಯರ ಎದುರು ಅರಮನೆ ನಗರಿ ಮೈಸೂರಿನಲ್ಲಿ ತನ್ನ ಕೊನೆಯ ಟೆಸ್ಟ್‌ ಪಂದ್ಯವನ್ನು ಆಡಿತ್ತು. ಅಂದಿನಿಂದ ಇಂದಿನವರೆಗೆ ಬರೋಬ್ಬರಿ 6 ವರ್ಷಗಳ ಕಾಲ ಭಾರತ ಮಹಿಳಾ ಪಡೆ ಯಾವುದೇ ಟೆಸ್ಟ್‌ ಕ್ರಿಕೆಟ್‌ ಆಡಿಲ್ಲ.

ಸದ್ಯ ಭಾರತ ಮಹಿಳಾ ಕ್ರಿಕೆಟ್‌ ತಂಡ ದಕ್ಷಿಣ ಆಫ್ರಿಕಾ ಎದುರು 5 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಪೈಪೋಟಿ ನಡೆಸುತ್ತಿದೆ. ಕೊರೊನಾ ವೈರಸ್‌ ಕಾರಣ ಕ್ರಿಕೆಟ್‌ಗೆ ಬಿದಿದ್ದ ಅಕಾಲಿಕ ವಿರಾಮ ಕಾರಣ ಬರೋಬ್ಬರಿ 12 ತಿಂಗಳ ನಂತರ ಭಾರತ ಮಹಿಳಾ ತಂಡ ಮೊದಲ ಸರಣಿಯನ್ನು ಆಡುತ್ತಿದೆ. ಈ ಸರಣಿ ನಂತರ ಹರಿಣ ಪಡೆಯ ಎದುರು ಟಿ20 ಸರಣಿಯಲ್ಲಿ ಕಾದಾಡಲಿದೆ.

“ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಮಹಿಳೆಯರ ಟೀಮ್ ಇಂಡಿಯಾ ಇದೇ ವರ್ಷ ಇಂಗ್ಲೆಂಡ್‌ ಮಹಿಳಾ ತಂಡದ ವಿರುದ್ಧ ಟೆಸ್ಟ್‌ ಪಂದ್ಯವನ್ನು ಆಡಲಿದೆ ಎಂದು ಹೇಳಲು ಸಂತಸವಾಗುತ್ತಿದೆ. ಭಾರತ ಮಹಿಳಾ ತಂಡ ಬಿಳಿಯ ಸಮವಸ್ತ್ರ ತೊಟ್ಟು ಕಣಕ್ಕಿಳಿಯಲಿದೆ,” ಎಂದು ಶಾ ಟ್ವೀಟ್‌ ಮಾಡಿದ್ದಾರೆ.

ಅಂದಹಾಗೆ ಈ ಪಂದ್ಯ ಎಂದು ನಡೆಯಲಿದೆ ಎಂಬ ಖಚಿತ ಮಾಹಿತಿಯನ್ನು ಬಿಸಿಸಿಐ ಕಾರ್ಯದರ್ಶಿ ನೀಡಿಲ್ಲ. ಆದರೆ ಭಾರತ ಮಹಿಳಾ ತಂಡ ಜೂನ್‌ ಅಥವಾ ಜುಲೈನಲ್ಲಿ ಇಂಗ್ಲೆಂಡ್‌ ಪ್ರವಾಸ ಕೈಗೊಳ್ಳುವುದಿದೆ. ಈ ಸಂದರ್ಭದಲ್ಲಿ ಇತ್ತಂಡಗಳ ನಡುವೆ ಏಕೈಕ ಟೆಸ್ಟ್‌ ಪಂದ್ಯ ನಡೆಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ಅಂದಹಾಗೆ ಈ ಪಂದ್ಯ ಎಂದು ನಡೆಯಲಿದೆ ಎಂಬ ಖಚಿತ ಮಾಹಿತಿಯನ್ನು ಬಿಸಿಸಿಐ ಕಾರ್ಯದರ್ಶಿ ನೀಡಿಲ್ಲ. ಆದರೆ ಭಾರತ ಮಹಿಳಾ ತಂಡ ಜೂನ್‌ ಅಥವಾ ಜುಲೈನಲ್ಲಿ ಇಂಗ್ಲೆಂಡ್‌ ಪ್ರವಾಸ ಕೈಗೊಳ್ಳುವುದಿದೆ. ಈ ಸಂದರ್ಭದಲ್ಲಿ ಇತ್ತಂಡಗಳ ನಡುವೆ ಏಕೈಕ ಟೆಸ್ಟ್‌ ಪಂದ್ಯ ನಡೆಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ಭಾರತ ಮಹಿಳಾ ಕ್ರಿಕೆಟ್‌ ತಂಡಕ್ಕೆ ಮಾಜಿ ಕ್ರಿಕೆಟಿಗ ಡಬ್ಲ್ಯು.ವಿ ರಾಮನ್ ತರಬೇತಿ ನೀಡುತ್ತಿದ್ದು, ಏಕದಿನ ಕ್ರಿಕೆಟ್‌ ತಂಡದ ನಾಯಕ ಮಿಥಾಲಿ ರಾಜ್‌ ಅವರೇ ಈ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಸಾರಥ್ಯ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಭಾರತ ಮಹಿಳಾ ಟಿ20 ತಂಡಕ್ಕೆ ಹರ್ಮನ್‌ ಪ್ರೀತ್‌ ಕೌರ್‌ ನಾಯಕಿ ಆಗಿದ್ದಾರೆ. ಮಿಥಾಲಿ ರಾಜ್‌ ಕಳೆದ ವರ್ಷ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಒಡಿಐ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್‌ ತಂಡ ಆಘಾತ ಅನುಭವಿಸಿದೆ. ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಭಾರತ ಮಹಿಳಾ ಪಡೆ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 177 ರನ್‌ ಮಾತ್ರವೇ ಗಳಿಸಿತ್ತು. ನಾಯಕಿ ಮಿಥಾಲಿ ರಾಜ್ (50) ಮತ್ತು ಉಪನಾಯಕಿ ಹರ್ಮನ್‌ಪ್ರೀತ್‌ ಕೌರ್ (40) ಹೊರತಾಗಿ ಉಳಿದ ಯಾವ ಬ್ಯಾಟರ್‌ಗಳೂ ರನ್‌ಗಳಿಸಲಿಲ್ಲ. ಬಳಿಕ ಗುರಿ ಬೆನ್ನತ್ತಿದ ಹರಿಣ ಪಡೆ 40.1 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ಗಳ ನಷ್ಟಕ್ಕೆ 178 ರನ್‌ ಬಾರಿಸಿ ಭರ್ಜರಿ ಜಯ ದಾಖಲಿಸಿತು. ದಕ್ಷಿಣ ಆಫ್ರಿಕಾ ಪರ ಲಿಝೆಲ್ ಲೀ ಅಜೇಯ 83 ರನ್‌ ಗಳಿಸಿದರೆ, ಮತ್ತೊಬ್ಬ ಓಪನರ್‌ ಲಾರಾ ವಾಲ್ವಾರ್ಡ್ಟ್‌ 80 ರನ್‌ ಗಳಿಸಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...