ಜೆಡಿಎಸ್ ಗೆ ಜಿ ಟಿ ದೇವೇಗೌಡ ಗುಡ್ ಬೈ!!

Date:

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರು ಜೆಡಿಎಸ್ ಪಕ್ಷ ತೊರೆಯುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಜಿಟಿಡಿ, “ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಳಿ ಮುಂದಿನ ರಾಜಕೀಯ ಬೆಳವಣಿಗೆ ಕುರಿತಂತೆ ವಿವರಣೆ ನೀಡಿದ್ದೇನೆ,” ಎಂದರು.

“ನನ್ನನ್ನು ಕ್ಷಮಿಸಿ ಅಪ್ಪಾಜಿ, ನಾನು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಜೊತೆ ಮಾತನಾಡಿದ್ದೇನೆ. ನನಗೆ ಹಾಗೂ ನನ್ನ ಮಗನಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡವುದಾಗಿ ಇಬ್ಬರೂ ಭರವಸೆ ನೀಡಿದ್ದಾರೆ. ಇದರಿಂದ ಇಬ್ಬರಿಗೂ ಟಿಕೆಟ್ ದೊರೆಯುವ ವಿಶ್ವಾಸವಿದೆ. ನೀನು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಈ ಅವಧಿ ತನಕ ನಾನು ಜೆಡಿಎಸ್ ಪಕ್ಷದಲ್ಲಿ ಇರುತ್ತೇನೆ,” ಎಂದು ಜಿ.ಟಿ.ದೇವೇಗೌಡರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರಿಗೆ ಜೆಡಿಎಸ್ ತೊರೆಯುತ್ತಿರುವ ವಿಚಾರವನ್ನು ತಿಳಿಸಿದ್ದಾರೆ.

 

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...