ಪ್ರಧಾನಿಯವರು 7ರಂದು ವಿಶೇಷ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬರಲಿದ್ದಾರೆ. ಈ ವೇಳೆ ಅವರಿಗೆ ರಾಜ್ಯದ ವಸ್ತು ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ಹೆಚ್ಚಿನ ಪರಿಹಾರ ನೀಡುವಂತೆ ಬೇಡಿಕೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ನಮಗೆ ಕೇಂದ್ರದಿಂದ ಹೆಚ್ಚಿನ ಪರಿಹಾರ ಸಿಗುವ ಸಂಭವವಿದೆ. ಈಗಾಗಲೇ ರಾಜ್ಯಕ್ಕೆ ಆಗಮಿಸಿದ ಅಧಿಕಾರಿಗಳ ತಂಡ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದೆ ಎಂದರು.
ಇದೇ 6ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಅಂದು ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಮಹಾರಾಷ್ಟ್ರ ಮುಖ್ಯಮಂತ್ರಿಗಳ ಮನವಿ ಮೇರೆಗೆ ಮುಂಬೈಗೆ ತೆರಳತ್ತಿದ್ದೇನೆ ಎಂದರು.