77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

Date:

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಮತ್ತು ಗೌರವದೊಂದಿಗೆ ಆಚರಿಸಲಾಯಿತು. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.

ಧ್ವಜಾರೋಹಣದ ನಂತರ ರಾಜ್ಯಪಾಲರು ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ ಪರೇಡ್ ವೀಕ್ಷಿಸಿದರು. ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಾಣೆಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಹಾಗೂ ನಗರಾದ್ಯಂತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದರು. ಸಾರ್ವಜನಿಕರ ಭಾಗವಹಿಸುವಿಕೆಗೆ ಅನುಕೂಲವಾಗುವಂತೆ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿತ್ತು.

ಪರೇಡ್‌ನಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಸೇರಿಸಿ ಒಟ್ಟು 516 ಮಂದಿ ಭಾಗವಹಿಸಿದ್ದರು. ಭದ್ರತೆ ಮತ್ತು ಕಾರ್ಯಕ್ರಮದ ನಿರ್ವಹಣೆಗೆ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...