ಬೆಂಗಳೂರು: ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು. ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು.
ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ದ್ಜಜಾರೋಹಣ ನೆರವೇರಿಸಿದ ಬಳಿಕ ಡಿಸಿಎಂ ಚನ್ನಪಟ್ಟಣಕ್ಕೆ ತೆರಳಿದರು.