ಜಮ್ಮು-ಕಾಶ್ಮಿರದ ಅನಂತ್ ನಾಗ್ ಹಾಗೂ ಸೋನಿಯಾನ ಜಿಲ್ಲೆಯಲ್ಲಿ ಭಾರತೀಯ ಯೋಧರು ನಡೆಸಿದ ಪ್ರತ್ಯೇಕ ಕಾರ್ಯಚರಣೆಯಲ್ಲಿ 8 ಮಂದಿ ಭಯೋತ್ಪಾದಕರನ್ನು ಕೊಂದಿದ್ದಾರೆ.
ಸೋಫಿಯಾನ ಜಿಲ್ಲೆಯ ದ್ರುಗ್ಗಾದ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಯೋಧರು 7ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಶರಣಾಗಲು ಒಪ್ಪದ ಭಯೋತ್ಪಾದಕನ ಮೇಲೆ ಗುಂಡಿಕ್ಕಿದ್ದು, ಆತ ಕೂಡ ಸಾವನ್ನಪ್ಪಿದ್ದಾನೆ.
ಸೋಫಿಯಾನದಲ್ಲಿ ಇನ್ನೂ 3,4 ಭಯೋತ್ಪಾದಕ ಅವಿತುಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಕಾರ್ಯಾಚರಣೆ ಮುಂದುವರೆದಿದೆ.

ಕಳೆದ ಮಧ್ಯರಾತ್ರಿ ಯೋಧರು ಈ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಓರ್ವ ಜೀವಂತವಾಗಿ ಸಿಕ್ಕಿದ್ದಾನೆ. ಉಳಿದವರನ್ನು ಹತ್ಯೆ ಮಾಡಿದ್ದಾರೆ. ಈ ಮೊದಲು ಪೊಲೀಸರು ಭಯೋತ್ಪಾದಕರ ಕುಟುಂಬವನ್ನು ಸಂಪರ್ಕಿಸಿ, ಅವರು ಶರಣಾಗುವಂತೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಓರ್ವ ಶರಣಾಗಿದ್ದು, ಮತ್ತೋರ್ವ ನಿರಾಕರಿಸಿದ್ದನು. ಇದೀಗ ಈತ ಯೋಧರ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯಿಂದಾಗಿ ಸದ್ಯ ಶ್ರೀನಗರ-ಬನಿಹಾಲ್ ನಡುವಿನ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ದಕ್ಷಿಣ ಕಾಶ್ಮೀರದಲ್ಲಿ ಅಂತರ್ಜಾಲ ಸೇವೆಯನ್ನು ಕೂಡ ರದ್ದುಗೊಳಿಸಲಾಗಿದೆ.







