No menu items!
25.8 C
Munich
Saturday, July 18, 2026

87.5 ಲಕ್ಷ ರೂ ಬೆಲೆಯ ಹೈಡ್ರೋಪೋನಿಕ್ ಗಾಂಜಾ ಜೊತೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಬಿದ್ದ ಪ್ರಯಾಣಿಕ 

Must read

ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಅಲ್ಲ ಇಡೀ ಸಮಾಜವನ್ನೇ ಹಾಳು ಮಾಡುತ್ತೆ. ಬದಲಾದ ಈ ಕಾಲದಲ್ಲಿ ಶೇಕಡಾ 70 ರಷ್ಟು ಜನ ಯುವ ಜನಾಂಗ ಮಾದಕ ವ್ಯಸನಕ್ಕೆ ದಾಸರಾಗಿದ್ದಾರೆ. ಮಾದಕ ಮಾಯಾಜಾಲದಲ್ಲಿ ಸಿಲುಕಿ ಮಾನಸಿಕವಾಗಿ ದೈಹಿಕವಾಗಿ ನೊಂದು ಬೆಂದು ಹೋಗುವುದಲ್ಲದೇ ಅನೇಕರು ತಮ್ಮ ಬದುಕಿಗೆ ತಾವೇ ತಮ್ಮ ಕೈಯಾರೆ ಕೊಳ್ಳಿ ಇಡುತ್ತಿದ್ದಾರೆ.

ಆದರೂ ಈ ಡ್ರಗ್ಸ್ ಎಂಬ ಮಾಯಾಜಾಲ ಭೇದಿಸಲು ಸಾಧ್ಯ ಆಗುತ್ತಿಲ್ಲ. ಅದರಲ್ಲಿಯೂ ಬೆಂಗಳೂರಿನಂತಹ ಮಹಾನಗರದಲ್ಲಿ ಮಾದಕ ಪದಾರ್ಥಗಳ ಹಾವಳಿ ಮಿತಿ ಮೀರಿ ಹೋಗಿದೆ. ಹೊರದೇಶದಿಂದ ಕದ್ದು ಮುಚ್ಚಿ ಡ್ರಗ್ಸ್‌ನ ಲಾಟ್ ಗಟ್ಟಲೆ ತೆಗೆದುಕೊಂಡು ಬರುವವರ ಸಂಖ್ಯೆ ಹೆಚ್ಚುತ್ತಿದೆ.

ಇದಕ್ಕೆ ಮತ್ತೊಂದು ಪುರಾವೆ ಎನ್ನುವಂತೆ ಬ್ಯಾಂಕಾಕ್‌ದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯ ಬ್ಯಾಗ್‌ನಲ್ಲಿ ಬಟ್ಟೆಗಳಲ್ಲ. ಬದಲಿಗೆ ಗಾಂಜಾ ಪತ್ತೆಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ರಲ್ಲಿ ಈ ಘಟನೆ ನಡೆದಿದ್ದು, ಚೆಕ್-ಇನ್ ಬ್ಯಾಗೇಜ್‌ನಿಂದ 87.5 ಲಕ್ಷ ರೂ. ಮೌಲ್ಯದ 2.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (ಎನ್‌ಡಿಪಿಎಸ್) ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಬೆಂಗಳೂರು ಕಸ್ಟಮ್ಸ್ ಇಲಾಖೆ ತನ್ನ ‘ಎಕ್ಸ್’ ಪೋಸ್ಟ್‌ನಲ್ಲಿ ತಿಳಿಸಿದೆ. ಸದ್ಯ ಆರೋಪಿಯ ಗುರುತನ್ನು ಇನ್ನೂ ಬಹಿರಂಗಗೊಳಿಸದ ಅಧಿಕಾರಿಗಳು ಸದ್ಯ ಬಂಧಿತ ವ್ಯಕ್ತಿಯ ಹಿಂದೆ ಇರೋ ದೊಡ್ಡ ಡ್ರಗ್ ಮಾಫಿಯಾ ಯಾವುದು? ಅನ್ನೋದರ ಬಗ್ಗೆ ಇಂಚಿಂಚೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article