8,999 ರೂಗಳಿಗೆ ಸ್ಯಾಮ್ಸಂಗ್ ಸ್ಮಾರ್ಟ್ ಫೋನ್

Date:

ದಕ್ಷಿಣ ಕೊರಿಯಾದ ಸ್ಯಾಮ್ಸಂಗ್ ಕಂಪೆನಿ ಇತ್ತೀಚೆಗಂತು ಅಗ್ಗದ ಬೆಲೆಗೆ ಆಕರ್ಷಕ ಫೀಚರ್ ಗಳ ಸ್ಮಾರ್ಟ್ ಫೋನನ್ನು ಮಾರುಕಟ್ಟೆಗೆ ಬಿಟ್ಟು ಭರ್ಜರಿ ಯಶಸ್ಸು ಕಾಣುತ್ತಿದೆ. ಇತ್ತೀಚೆಗಷ್ಟೆ ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ ‍F02ಎಸ್ ಮತ್ತು ಗ್ಯಾಲಕ್ಸಿ F12 ಮೊಬೈಲ್ ಅನ್ನು ಭಾರತದಲ್ಲಿ ಬಿಡುಡಗೆ ಮಾಡಿತ್ತು. ಈ ಪೈಕಿ ಗ್ಯಾಲಕ್ಸಿ F02s ಇಂದು ಮಧ್ಯಾಹ್ನ 12ರಂದು ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಫಸ್ಟ್‌ ಸೇಲ್ ಆರಂಭಿಸಲಿದೆ.

ಸ್ಯಾಮ್ಸಂಗ್ ಗ್ಯಾಲಕ್ಸಿ‍ F02ಎಸ್ ವಾಟರ್ ಡ್ರಾಪ್ ಡಿಸೈನ್ ಹೊಂದಿರುವ ಡಿಸ್ಪ್ಲೇ ಹೊಂ ಲಭ್ಯವಾಗುತ್ತಿದೆ. ಡೈಮಂಡ್ ಬ್ಲೂ, ಡೈಮಂಡ್ ವೈಡ್ ಮತ್ತು ಡೈಮಂಡ್ ಬ್ಲಾಕ್ ಕಲರ್ ನಲ್ಲಿ ಲಭ್ಯವಾಗುತ್ತಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಇನ್ಫಿನಿಟಿ ವಿ ಮಾದರಿಯ ಡಿಸ್‌ಪ್ಲೇಯನ್ನು ಒಳಗೊಂಡಿದೆ. ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾಗಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವು ಇದೆ.

ಇನ್ನೂ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರ್‌ ಇದೆ.

5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇದರ ಬೆಲೆ 3GB RAM + 32GB ಸ್ಟೋರೇಜ್ ಸಾಮರ್ಥ್ಯಕ್ಕೆ 8,999ರೂ. ಇದೆ. 4GB RAM + 64GB ಸ್ಟೋರೇಜ್ ದರವು 9,999ರೂ. ನಿಗದಿ ಪಡಿಸಲಾಗಿದೆ.

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...