No menu items!
17.8 C
Munich
Friday, July 3, 2026

ತುಳುನಾಡಿನ ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್

Must read

ತುಳುನಾಡಿನ ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್

ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್ ಎಂದೇ ಖ್ಯಾತಿ ಪಡೆದಿರುವ ನಟಿ ರಚಿತಾ ರಾಮ್ ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜ ದೈವಗೆ ಹರಕೆ ಕೋಲ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿರುವ ಕೊರಗಜ್ಜ ಸನ್ನಿಧಿಯಲ್ಲಿ ನಟಿ ವಿಶೇಷ ಪೂಜೆ ಹಾಗೂ ಕೋಲ ಸೇವೆ ನೆರವೇರಿಸಿದರು.

ತಾನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಕೆಲವು ಕಾರ್ಯಗಳು ಯಶಸ್ವಿಯಾದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವುದಾಗಿ ರಚಿತಾ ರಾಮ್ ಹರಕೆ ಹೊತ್ತಿದ್ದರು ಎನ್ನಲಾಗಿದ್ದು, ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ.

ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿರುವ ರಚಿತಾ ರಾಮ್, ಸದ್ಯ ಧ್ರುವ ಸರ್ಜಾ ಜೊತೆ ‘ಕ್ರಿಮಿನಲ್’ ಸಿನಿಮಾದಲ್ಲೂ, ನಿನಾಸಂ ಸತೀಶ್ ಅಭಿನಯದ ‘ಅಯೋಗ್ಯ 2’ ಚಿತ್ರದಲ್ಲೂ ನಟಿಸುತ್ತಿದ್ದಾರೆ.

ಇದಲ್ಲದೆ, ತಮಿಳಿನ ಪ್ರಮುಖ ನಿರ್ಮಾಣ ಸಂಸ್ಥೆಯೊಂದರ ಜೊತೆ ಮಾತುಕತೆ ನಡೆಯುತ್ತಿದ್ದು, ತೆಲುಗು ಭಾಷೆಯ ಎರಡು ಹೊಸ ಸಿನಿಮಾಗಳ ಘೋಷಣೆ ಇದೇ ತಿಂಗಳಲ್ಲಿ ಹೊರಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

- Advertisement -spot_img

More articles

- Advertisement -spot_img

Latest article