No menu items!
10.6 C
Munich
Tuesday, May 19, 2026

ಬೆಳಗ್ಗೆಯೇ ಬೆಲೆ ಏರಿಕೆಯ ಬಿಸಿ: ಪೆಟ್ರೋಲ್, ಡೀಸೆಲ್ ದರದಲ್ಲಿ 90 ಪೈಸೆ ಹೆಚ್ಚಳ

Must read

ಬೆಳಗ್ಗೆಯೇ ಬೆಲೆ ಏರಿಕೆಯ ಬಿಸಿ: ಪೆಟ್ರೋಲ್, ಡೀಸೆಲ್ ದರದಲ್ಲಿ 90 ಪೈಸೆ ಹೆಚ್ಚಳ

ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ದೇಶದ ಜನರಿಗೆ ತೈಲ ದರ ಏರಿಕೆಯ ಶಾಕ್ ಎದುರಾಗಿದೆ. ಮಂಗಳವಾರ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್ಗೆ ಸುಮಾರು 90 ಪೈಸೆ ಹೆಚ್ಚಳ ಮಾಡಿವೆ. ಕಳೆದ ಒಂದು ವಾರದೊಳಗೆ ಇದು ಎರಡನೇ ಬಾರಿ ದರ ಏರಿಕೆಯಾಗಿದೆ.
ಮೇ 15ರಂದು ತೈಲ ಕಂಪನಿಗಳು ಏಕಾಏಕಿ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಿದ್ದವು. ಅದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಬೆಲೆ ಏರಿಕೆ ಮಾಡಿರುವುದು ವಾಹನ ಸವಾರರಿಗೆ ಹೆಚ್ಚುವರಿ ಹೊರೆ ತಂದಿದೆ.
ಹಿಂದಿನ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 94.77 ರೂ.ಗಳಿಂದ 97.77 ರೂ.ಗಳಿಗೆ ಏರಿಕೆಯಾಗಿತ್ತು. ಅದೇ ರೀತಿ ಡೀಸೆಲ್ ದರ 87.67 ರೂ.ಗಳಿಂದ 90.67 ರೂ.ಗಳಿಗೆ ತಲುಪಿತ್ತು. ಇದೀಗ ಹೊಸ ಏರಿಕೆಯಿಂದ ಇಂಧನ ದರ ಮತ್ತಷ್ಟು ಹೆಚ್ಚಳವಾಗಿದೆ.
ಮಾರುಕಟ್ಟೆ ವಿಶ್ಲೇಷಕರು ಹಾಗೂ ಕೈಗಾರಿಕಾ ಮೂಲಗಳ ಪ್ರಕಾರ, ಜಾಗತಿಕ ರಾಜತಾಂತ್ರಿಕ ಮತ್ತು ಮಿಲಿಟರಿ ಬಿಕ್ಕಟ್ಟುಗಳೇ ಈ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ತೈಲ ಪೂರೈಕೆಗೆ ಅಡಚಣೆ ಉಂಟಾಗಿದ್ದು, ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 100 ಡಾಲರ್ ಗಡಿ ದಾಟಿದೆ ಎನ್ನಲಾಗಿದೆ.
ಕಚ್ಚಾತೈಲ ಬೆಲೆ ಏರಿಕೆಯಿಂದ ಭಾರತೀಯ ತೈಲ ಸಂಸ್ಕರಣಾ ಕಂಪನಿಗಳಿಗೆ ಭಾರೀ ನಷ್ಟ ಉಂಟಾಗುತ್ತಿದ್ದು, ಅದನ್ನು ಸರಿದೂಗಿಸಲು ತೈಲ ಕಂಪನಿಗಳು ಹಂತ ಹಂತವಾಗಿ ದರ ಹೆಚ್ಚಳ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಕಳೆದ ವಾರದ 3 ರೂ. ಏರಿಕೆಯಿಂದ ಕಂಪನಿಗಳಿಗೆ ಆಗುತ್ತಿದ್ದ ಶೇ.25ರಷ್ಟು ನಷ್ಟ ಕಡಿಮೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ ದರ ಹೆಚ್ಚಳ ಮಾಡಲಾಗಿದೆ.

- Advertisement -spot_img

More articles

- Advertisement -spot_img

Latest article