No menu items!
11.2 C
Munich
Thursday, May 21, 2026

ಬೆಂಗಳೂರು ಸೇರಿ ರಾಜ್ಯಾದ್ಯಂತ 4 ದಿನ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Must read

ಬೆಂಗಳೂರು ಸೇರಿ ರಾಜ್ಯಾದ್ಯಂತ 4 ದಿನ ಭಾರೀ ಮಳ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ರಾಜ್ಯದ ಇನ್ನುಳಿದ 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 22ರಂದು ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುಂದುವರಿಯಲಿದ್ದು, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 23ರಂದು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ಅಧಿಕಾರಿಗಳು ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ.

- Advertisement -spot_img

More articles

- Advertisement -spot_img

Latest article