No menu items!
19.4 C
Munich
Thursday, May 21, 2026

ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು; ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿ.ವೈ. ವಿಜಯೇಂದ್ರ

Must read

ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು; ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಕುರಿತು ನೀಡಿರುವ ಹೇಳಿಕೆಗೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ನಗರದ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದನ್ನು ರಾಹುಲ್ ಗಾಂಧಿ ಸಹಿಸಿಕೊಳ್ಳಲಾಗುತ್ತಿಲ್ಲ. ಇದೇ ಕಾರಣಕ್ಕೆ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಆರೋಪಿಸಿದರು.
“ಕಾಂಗ್ರೆಸ್ನ ರಾಷ್ಟ್ರೀಯ ನಾಯಕನಾಗಿರುವ ವ್ಯಕ್ತಿ ಬಾಲಿಶ ರೀತಿಯಲ್ಲಿ ಮಾತನಾಡಬಾರದು. ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ” ಎಂದು ವಿಜಯೇಂದ್ರ ಹೇಳಿದರು.
ಪ್ರಧಾನಿ ಮೋದಿ ಅವರ ಆಡಳಿತವನ್ನು ಸಮರ್ಥಿಸಿಕೊಂಡ ಅವರು, “ಹಿಂದುಳಿದ ವರ್ಗದಿಂದ ಬಂದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಭಾರತವನ್ನು ವಿಶ್ವದ ನಾಲ್ಕನೇ ಆರ್ಥಿಕ ಶಕ್ತಿಯನ್ನಾಗಿ ರೂಪಿಸಿದ್ದಾರೆ” ಎಂದು ಹೇಳಿದರು.
ಇದೇ ವೇಳೆ ಅಮಿತ್ ಶಾ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ವಿಜಯೇಂದ್ರ, “ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡುವ ಧೈರ್ಯ ಕಾಂಗ್ರೆಸ್ಗೆ ಇರಲಿಲ್ಲ. ಅದನ್ನು ಅಮಿತ್ ಶಾ ಮಾಡಿದ್ದಾರೆ. ದೇಶದಲ್ಲಿ ನಕ್ಸಲ ಚಟುವಟಿಕೆಗಳನ್ನು ಬುಡಮೇಲೆ ನಾಶ ಮಾಡಲು ಅವರು ಪ್ರಮುಖ ಪಾತ್ರವಹಿಸಿದ್ದಾರೆ” ಎಂದು ಹೇಳಿದರು.
“ಮೋದಿ ಸರ್ಕಾರ ಭ್ರಷ್ಟಾಚಾರರಹಿತ ಆಡಳಿತ ನೀಡುತ್ತಿದೆ. ದೇಶದ ಅಭಿವೃದ್ಧಿಯನ್ನು ಕಾಂಗ್ರೆಸ್ ಸಹಿಸಿಕೊಳ್ಳಲಾಗದೆ ಈ ರೀತಿಯ ಟೀಕೆಗಳನ್ನು ಮಾಡುತ್ತಿದೆ” ಎಂದು ಅವರು ಆರೋಪಿಸಿದರು.
ಅಲ್ಲದೆ, ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

- Advertisement -spot_img

More articles

- Advertisement -spot_img

Latest article