No menu items!
28.3 C
Munich
Wednesday, May 27, 2026

ನಾಳೆ ಬೆಳಗ್ಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; 11:30ಕ್ಕೆ ರಾಜಭವನಕ್ಕೆ ಭೇಟಿ

Must read

ನಾಳೆ ಬೆಳಗ್ಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; 11:30ಕ್ಕೆ ರಾಜಭವನಕ್ಕೆ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ.
ರಾಜೀನಾಮೆಯ ಸಮಯದ ಬಗ್ಗೆ ಹಲವು ಊಹಾಪೋಹಗಳು ವ್ಯಕ್ತವಾಗಿದ್ದರೂ, ಇದೀಗ ಬೆಳಗ್ಗೆ 11:30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ.
ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ಅವರು ತಮ್ಮ ಸಚಿವರು ಹಾಗೂ ಆಪ್ತ ಶಾಸಕರಿಗೆ ಉಪಹಾರ ಕೂಟ ಏರ್ಪಡಿಸಿದ್ದು, ಸಭೆಗೆ ಆಹ್ವಾನ ನೀಡಿದ್ದಾರೆ. ಈ ಬ್ರೇಕ್ಫಾಸ್ಟ್ ಸಭೆಯ ಬಳಿಕ ಅವರು ರಾಜಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ.
ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಿರುವ ಸಿದ್ದರಾಮಯ್ಯ ಅವರು, ರಾಜ್ಯ ರಾಜಕೀಯದ ಇತ್ತೀಚಿನ ಬೆಳವಣಿಗೆಗಳು ಸೇರಿದಂತೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವ ಸಾಧ್ಯತೆಯಿದೆ.
ಇದಕ್ಕೂ ಮೊದಲು ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರ 62ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದರು. ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಅವರು, ದೇಶಕ್ಕೆ ನೆಹರೂ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.
ಕಾರ್ಯಕ್ರಮದ ವೇಳೆ ಮಾಧ್ಯಮಗಳು ರಾಜ್ಯ ರಾಜಕೀಯ ಬೆಳವಣಿಗೆಗಳು ಹಾಗೂ ದೆಹಲಿ ಪ್ರವಾಸದ ಬಗ್ಗೆ ಪ್ರಶ್ನೆ ಕೇಳಿದಾಗ ಸಿದ್ದರಾಮಯ್ಯ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡಲಿಲ್ಲ.
ರಾಜಕೀಯ ಬೆಳವಣಿಗೆಗಳ ಕುರಿತು ಪ್ರಶ್ನಿಸಿದಾಗ, “ನಾಳೆ ಮಾತನಾಡುತ್ತೇನೆ. ಏನೇ ಇದ್ದರೂ ನಾಳೆಯೇ ಮಾತನಾಡುತ್ತೇನೆ” ಎಂದು ಒಂದೇ ಸಾಲಿನಲ್ಲಿ ಉತ್ತರಿಸಿ ಅಲ್ಲಿಂದ ತೆರಳಿದರು.

- Advertisement -spot_img

More articles

- Advertisement -spot_img

Latest article