No menu items!
12.5 C
Munich
Thursday, May 28, 2026

ಕಾವೇರಿ ನಿವಾಸದಲ್ಲಿ ಹೈವೋಲ್ಟೇಜ್ ಸಭೆ: ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

Must read

ಕಾವೇರಿ ನಿವಾಸದಲ್ಲಿ ಹೈವೋಲ್ಟೇಜ್ ಸಭೆ: ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ ಬ್ರೇಕ್ಫಾಸ್ಟ್ ಸಭೆ ಸಾಕಷ್ಟು ಗಮನ ಸೆಳೆದಿದೆ.
ಬೆಳಗ್ಗೆ ಉಪಾಹಾರ ಸಭೆಗೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡು ಬಳಿಕ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಈ ದೃಶ್ಯ ರಾಜಕೀಯ ವಲಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಯಿತು.
ಮನೆಗೆ ಆಗಮಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ನಂತರ ಸಚಿವರು ಹಾಗೂ ಹಿರಿಯ ನಾಯಕರೊಂದಿಗೆ ಸಭೆ ಮುಂದುವರಿಯಿತು.


ಸಭೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಕ್ಕಪಕ್ಕದಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕುಳಿತಿದ್ದರು.
ಈ ಸಭೆಯಲ್ಲಿ ರಾಜ್ಯ ಸರ್ಕಾರದ ಹಲವು ಸಚಿವರು ಹಾಗೂ ಹಿರಿಯ ನಾಯಕರು ಭಾಗವಹಿಸಿದ್ದರು. ಡಿ.ಕೆ. ಶಿವಕುಮಾರ್, ಪರಮೇಶ್ವರ್, ಭೈರತಿ ಸುರೇಶ್, ಸಂತೋಷ್ ಲಾಡ್, ಎಂ.ಸಿ. ಸುಧಾಕರ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಎಸ್.ಎಸ್. ಮಲ್ಲಿಕಾರ್ಜುನ, ಕೆ.ಜೆ. ಜಾರ್ಜ್, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಚೆಲುವರಾಯಸ್ವಾಮಿ, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಮಂಕಾಳ್ ವೈದ್ಯ, ಶರಣು ಪ್ರಕಾಶ್ ಪಾಟೀಲ್, ಮುನಿಯಪ್ಪ, ಹೆಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ ಹಾಗೂ ಬೋಸರಾಜು ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲೇ ನಡೆದ ಈ ಉಪಾಹಾರ ಸಭೆ ರಾಜಕೀಯವಾಗಿ ಮಹತ್ವ ಪಡೆದಿದೆ.

- Advertisement -spot_img

More articles

- Advertisement -spot_img

Latest article