No menu items!
12.5 C
Munich
Thursday, May 28, 2026

ಯಾವುದೇ ನೋವಿಲ್ಲ; ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದ ಸಿದ್ದರಾಮಯ್ಯ

Must read

ಯಾವುದೇ ನೋವಿಲ್ಲ; ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮುನ್ನ ಸಚಿವರು ಹಾಗೂ ಆಪ್ತ ನಾಯಕರೊಂದಿಗೆ ನಡೆದ ಉಪಹಾರ ಸಭೆಯಲ್ಲಿ ಸಿದ್ದರಾಮಯ್ಯ ಭಾವುಕವಾಗಿ ಮಾತನಾಡಿದ್ದಾರೆ.
“ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿಯೇ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಹೇಳಿದ ಸಿದ್ದರಾಮಯ್ಯ, ಪಕ್ಷದ ಹೈಕಮಾಂಡ್ ಸೂಚನೆ ಪಾಲಿಸುವುದು ತಮ್ಮ ಕರ್ತವ್ಯ ಎಂದು ತಿಳಿಸಿದ್ದಾರೆ.
ಸಂಪುಟ ಸಹೋದ್ಯೋಗಿಗಳೊಂದಿಗೆ ನಡೆದ ಸಭೆಯಲ್ಲಿ ಈ ಹಿಂದೆ ನಡೆದಿದ್ದ ಒಪ್ಪಂದದ ವಿಚಾರವನ್ನೂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ರಾಜೀನಾಮೆ ನೀಡುವ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ ಎನ್ನಲಾಗಿದೆ.
ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ನೇರ ಉತ್ತರ ನೀಡದ ಅವರು, “ಮುಂದಿನ ನಾಯಕತ್ವದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಮುಂದಿನ ಎಲ್ಲಾ ಪ್ರಕ್ರಿಯೆಗಳನ್ನು ಪಕ್ಷದ ನಾಯಕರು ನಿರ್ಧರಿಸುತ್ತಾರೆ” ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಈ ಮಾತುಗಳನ್ನು ಹೇಳುತ್ತಿದ್ದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವುಕರಾದರು ಎನ್ನಲಾಗಿದೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎಂಬ ಭಾವನೆಯಿಂದ ಡಿಕೆಶಿ ಕಣ್ಣೀರಿಟ್ಟರು ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ಪಡೆದಿರುವ ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

- Advertisement -spot_img

More articles

- Advertisement -spot_img

Latest article