No menu items!
13.8 C
Munich
Monday, June 1, 2026

ಜನರಿಗೆ ಮತ್ತೊಂದು ಬೆಲೆ ಶಾಕ್: 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಹೆಚ್ಚಳ

Must read

ಜನರಿಗೆ ಮತ್ತೊಂದು ಬೆಲೆ ಶಾಕ್: 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಹೆಚ್ಚಳ

ನವದೆಹಲಿ/ಬೆಂಗಳೂರು: ಇಂಧನ ದರ ಏರಿಕೆಯಿಂದ ಈಗಾಗಲೇ ಸಂಕಷ್ಟ ಎದುರಿಸುತ್ತಿರುವ ಜನತೆಗೆ ಕೇಂದ್ರ ಸರ್ಕಾರ ಮತ್ತೊಂದು ಬೆಲೆ ಶಾಕ್ ನೀಡಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ದರವನ್ನು ಮತ್ತೆ ಹೆಚ್ಚಿಸಲಾಗಿದ್ದು, ಪರಿಷ್ಕೃತ ಬೆಲೆಗಳು ಇಂದಿನಿಂದಲೇ ಜಾರಿಗೆ ಬಂದಿವೆ.
ಹೊಸ ದರಗಳ ಪ್ರಕಾರ, ದೆಹಲಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 42 ರೂಪಾಯಿ ಏರಿಕೆಯಾಗಿದ್ದು, ಪ್ರತಿ ಸಿಲಿಂಡರ್ಗೆ 3,113.50 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಸಿಲಿಂಡರ್ ದರ 46 ರೂಪಾಯಿ ಹೆಚ್ಚಳ ಕಂಡು, 3,198 ರೂಪಾಯಿಗೆ ತಲುಪಿದೆ.
ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 53.50 ರೂಪಾಯಿ ಏರಿಕೆಯಾಗಿದ್ದು, ಪ್ರತಿ ಸಿಲಿಂಡರ್ಗೆ 3,255.50 ರೂಪಾಯಿಯಾಗಿದೆ. ಇದೇ ವೇಳೆ 5 ಕೆಜಿ ಫ್ರೀ-ಟ್ರೇಡ್ ಎಲ್ಪಿಜಿ ಸಿಲಿಂಡರ್ ದರವೂ 11 ರೂಪಾಯಿ ಹೆಚ್ಚಳಗೊಂಡಿದ್ದು, ಅದರ ಬೆಲೆ 821.50 ರೂಪಾಯಿಗೆ ಏರಿಕೆಯಾಗಿದೆ.
ಆದರೆ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕಳೆದ ಮೇ 1ರಂದು ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಭಾರೀ ಪ್ರಮಾಣದ ಹೆಚ್ಚಳ ಮಾಡಲಾಗಿತ್ತು. ಇದೀಗ ಒಂದು ತಿಂಗಳ ಅಂತರದಲ್ಲೇ ಮತ್ತೊಮ್ಮೆ ದರ ಪರಿಷ್ಕರಣೆ ಮಾಡಲಾಗಿದ್ದು, ಇದು ಸತತ ಎರಡನೇ ಬೆಲೆ ಏರಿಕೆಯಾಗಿದೆ.

- Advertisement -spot_img

More articles

- Advertisement -spot_img

Latest article