No menu items!
24.1 C
Munich
Thursday, June 4, 2026

ಭೀಕರ ರಸ್ತೆ ಅಪಘಾತ; ಎರಡು ಕಾರುಗಳ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರು ಸಾವು

Must read

ಭೀಕರ ರಸ್ತೆ ಅಪಘಾತ; ಎರಡು ಕಾರುಗಳ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರು ಸಾವು

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಆಂಧ್ರಪ್ರದೇಶ ಮೂಲದವರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಹಿರಿಯೂರಿನಿಂದ ಹುಳಿಯಾರು ಕಡೆಗೆ ಸಂಚರಿಸುತ್ತಿದ್ದ ಓಮ್ನಿ ಕಾರಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಓಮ್ನಿ ಕಾರು ರಸ್ತೆ ಬದಿಗೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹುಳಿಯಾರು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article