No menu items!
16 C
Munich
Monday, June 8, 2026

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ನಿಧನ

Must read

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ನಿಧನ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.
ಭಾನುವಾರ ರಾತ್ರಿ ಹೃದಯಸ್ತಂಭನ ಉಂಟಾಗಿ ಸೂರಜ್ ಹೆಗ್ಡೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಹಾಗೂ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗರಾಗಿದ್ದ ಸೂರಜ್ ಹೆಗ್ಡೆ, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ್ದರು. ಎಐಸಿಸಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಅವರು ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳ ಉಸ್ತುವಾರಿಯಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಸೂರಜ್ ಹೆಗ್ಡೆ, ಹಂತ ಹಂತವಾಗಿ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿ, ಕಾರ್ಮಿಕರ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದರು.
ಪ್ರಸ್ತುತ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸೂರಜ್ ಹೆಗ್ಡೆ, ಸರ್ಕಾರದ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಸೂರಜ್ ಹೆಗ್ಡೆ ಅವರ ಅಗಲಿಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು, ಗಣ್ಯರು ಹಾಗೂ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿಗಳಿಗೆ ಸಾಂತ್ವನ ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article