No menu items!
15 C
Munich
Saturday, June 13, 2026

ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ; ಡಾಲರ್ಸ್ ಕಾಲೋನಿ ನಿವಾಸಕ್ಕೆ ಭೇಟಿ

Must read

ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ; ಡಾಲರ್ಸ್ ಕಾಲೋನಿ ನಿವಾಸಕ್ಕೆ ಭೇಟಿ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರಿಗೆ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಅಂತಿಮ ನಮನ ಸಲ್ಲಿಸಿದರು.
ದೆಹಲಿಯಿಂದ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ, ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸೂರಜ್ ಹೆಗ್ಡೆ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಉಪಸ್ಥಿತರಿದ್ದರು.
ಸೂರಜ್ ಹೆಗ್ಡೆ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗರಾಗಿದ್ದರು. ಜೂನ್ 7ರಂದು ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದ ಸೂರಜ್ ಹೆಗ್ಡೆ, ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದರು. ಹಿಂದುಳಿದ ವರ್ಗಗಳ ಹಕ್ಕುಗಳು, ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಅವರು ನಿರಂತರವಾಗಿ ಕೆಲಸ ಮಾಡಿದ್ದರು.
ಸೂರಜ್ ಹೆಗ್ಡೆ ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಹಾಗೂ ವಿವಿಧ ವಲಯದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆಯಿಂದ ಪಕ್ಷಕ್ಕೆ ಹಾಗೂ ಸಾಮಾಜಿಕ ನ್ಯಾಯದ ಚಳವಳಿಗೆ ದೊಡ್ಡ ನಷ್ಟವಾಗಿದೆ ಎಂದು ನಾಯಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -spot_img

More articles

- Advertisement -spot_img

Latest article