No menu items!
23.9 C
Munich
Thursday, June 18, 2026

ಹೆಚ್.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ; ಟೆಂಡರ್ ಅಕ್ರಮದ ತನಿಖೆಗೆ ರಾಜ್ಯಪಾಲರಿಗೆ ದೂರು

Must read

ಹೆಚ್.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ; ಟೆಂಡರ್ ಅಕ್ರಮದ ತನಿಖೆಗೆ ರಾಜ್ಯಪಾಲರಿಗೆ ದೂರು

ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಾಮಾಜಿಕ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ವಿರುದ್ಧ ಟೆಂಡರ್ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೆಂಗಳೂರಿನ ನಿವಾಸಿಯೊಬ್ಬರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ, ಹೆಚ್.ಸಿ. ಮಹದೇವಪ್ಪ ಅವರು ಸಾಮಾಜಿಕ ಕಲ್ಯಾಣ ಸಚಿವರಾಗಿದ್ದ ಅವಧಿಯಲ್ಲಿ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ/ಮಂಡಳಿಯಲ್ಲಿ ನಡೆದ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ, ಭ್ರಷ್ಟಾಚಾರ, ದಾಖಲೆಗಳ ನಕಲಿ ಸೃಷ್ಟಿ ಹಾಗೂ ಅಧಿಕಾರ ದುರುಪಯೋಗ ನಡೆದಿದೆ ಎಂದು ಆರೋಪಿಸಲಾಗಿದೆ.
ಮನವಿಯ ಪ್ರಕಾರ, KREIS ಅಡಿಯಲ್ಲಿ ನಡೆದ ಹಲವು ಟೆಂಡರ್ಗಳನ್ನು ಪಾರದರ್ಶಕ ಹಾಗೂ ಸ್ಪರ್ಧಾತ್ಮಕ ಪ್ರಕ್ರಿಯೆಯ ಮೂಲಕ ನೀಡುವ ಬದಲು, ಕೆಲ ನಿರ್ದಿಷ್ಟ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ಮಂಜೂರು ಮಾಡಲಾಗಿದೆ ಎನ್ನಲಾಗಿದೆ. ಟೆಂಡರ್ ಪಡೆಯಲು ಕೆಲವು ಸಂಸ್ಥೆಗಳು ನಕಲಿ ಅಥವಾ ತಿರುಚಿದ ಅನುಭವ ಪ್ರಮಾಣಪತ್ರಗಳು, ಯೋಜನೆ ಪೂರ್ಣಗೊಳಿಸಿದ ದಾಖಲೆಗಳು ಹಾಗೂ ಇತರೆ ಪೂರಕ ದಾಖಲೆಗಳನ್ನು ಸಲ್ಲಿಸಿ ಅರ್ಹತೆ ಪಡೆದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಸ್ವತಂತ್ರ, ನಿಷ್ಪಕ್ಷಪಾತ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ, ಅರ್ಹತಾ ದಾಖಲೆಗಳ ಪರಿಶೀಲನೆ, ಸರ್ಕಾರಿ ಅಧಿಕಾರಿಗಳ ಪಾತ್ರ ಹಾಗೂ GeM ಪೋರ್ಟಲ್ ನಿಯಮಗಳ ಪಾಲನೆ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದಲ್ಲದೆ, ತನಿಖೆಯಲ್ಲಿ ಆರೋಪಗಳು ಸಾಬೀತಾದಲ್ಲಿ ಸಾರ್ವಜನಿಕ ನಿಧಿಗೆ ಉಂಟಾದ ನಷ್ಟವನ್ನು ಸಂಬಂಧಪಟ್ಟವರಿಂದ ವಸೂಲಿ ಮಾಡಬೇಕು. ಜೊತೆಗೆ ಹೆಚ್.ಸಿ. ಮಹದೇವಪ್ಪ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ದೂರುದಾರರು ಮನವಿ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article