No menu items!
23.9 C
Munich
Thursday, June 18, 2026

ವಿಧಾನ ಪರಿಷತ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಸಿದ್ಧತೆ: ಬಿಡದಿ ರೆಸಾರ್ಟ್ನಲ್ಲಿ ಇಂದು ಅಣಕು ಮತದಾನ

Must read

ವಿಧಾನ ಪರಿಷತ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಸಿದ್ಧತೆ: ಬಿಡದಿ ರೆಸಾರ್ಟ್ನಲ್ಲಿ ಇಂದು ಅಣಕು ಮತದಾನ

ರಾಮನಗರ: ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಶಾಸಕರಿಗೆ ಅಣಕು ಮತದಾನ ಹಾಗೂ ಮತದಾನ ಪ್ರಕ್ರಿಯೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ.
ಬಿಡದಿಯ ವಂಡರ್ಲಾ ರೆಸಾರ್ಟ್ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ಶಾಸಕರಿಗೆ ಮತದಾನ ವಿಧಾನವನ್ನು ವಿವರಿಸಿ ಅಣಕು ಮತದಾನ ನಡೆಸಿದರು. ಚುನಾವಣೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಮತದಾನದ ಪ್ರಕ್ರಿಯೆ ಬಗ್ಗೆ ಸದಸ್ಯರಿಗೆ ಮಾರ್ಗದರ್ಶನ ನೀಡಲಾಯಿತು.
ಈಗಾಗಲೇ ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರು ಬಿಡದಿಯ ವಂಡರ್ಲಾ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದು, ಬುಧವಾರ ಬೆಳಗ್ಗೆ ಎಲ್ಲರೂ ಒಟ್ಟಾಗಿ ಬಸ್ ಮೂಲಕ ವಿಧಾನಸೌಧಕ್ಕೆ ತೆರಳಿ ಮತದಾನ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ವಿಧಾನ ಪರಿಷತ್ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಜಮೀರ್ ಅಹ್ಮದ್, ಕಾಂಗ್ರೆಸ್ ಶಾಸಕಾಂಗ ಪಕ್ಷ ಸಂಪೂರ್ಣ ಒಗ್ಗಟ್ಟಿನಿಂದ ಇದೆ ಎಂದು ಹೇಳಿದರು.
“ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಮಾರು 140 ಶಾಸಕರು ಭಾಗವಹಿಸಿದ್ದರು. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಅಗತ್ಯವಿರುವಷ್ಟು ಮತಗಳು ನಮ್ಮ ಬಳಿ ಇವೆ. ಹೆಚ್ಚುವರಿ ಮತಗಳ ಅವಶ್ಯಕತೆ ಇಲ್ಲ” ಎಂದು ಅವರು ತಿಳಿಸಿದರು.
ಜೆಡಿಎಸ್ ಶಾಸಕರನ್ನು ಸಂಪರ್ಕಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಮಗೆ ಬೇರೆ ಪಕ್ಷಗಳ ಬೆಂಬಲದ ಅಗತ್ಯವಿಲ್ಲ. ಅಗತ್ಯ ಸಂಖ್ಯಾಬಲ ನಮ್ಮಲ್ಲಿದೆ” ಎಂದು ಸ್ಪಷ್ಟಪಡಿಸಿದರು.

- Advertisement -spot_img

More articles

- Advertisement -spot_img

Latest article